ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ರಸ್ತೆ ಅಪಘಾತ ನಿಯಂತ್ರಣಕ್ಕೆ ಜಿಲ್ಲಾ ಆಡಳಿತ ಮಹತ್ವದ ಸೂಚನೆ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 44 ವೀಕ್ಷಣೆಗಳು

ರಸ್ತೆ ಅಪಘಾತ ನಿಯಂತ್ರಣಕ್ಕೆ ಜಿಲ್ಲಾ ಆಡಳಿತ ಮಹತ್ವದ ಸೂಚನೆ

ನಗರ ಸೇರಿದಂತೆ ಜಿಲ್ಲೆಯಾದ್ಯಂತ ರಸ್ತೆ ಸುರಕ್ಷತೆ ಇಲ್ಲದೆ ಸಾರ್ವಜನಿಕರು ತುಂಬಾ ದಿನಗಳಿಂದ ನಿತ್ಯ ಪರದಾಡುತ್ತ ಜೀವ ಅಂಗೈಯಲ್ಲಿ ಹಿಡಿದು ಹರಸಾಹಸದ ಪ್ರಯಾಣ ನಡೆಸುತ್ತಿದ್ದಾರೆ. ಈ ಬಗೆಯ ಸಭೆ ಎಂದೋ ನಡೆದು ನೀಡಿದ ಸೂಚನೆಗಳು ಕಾರ್ಯರೂಪಕ್ಕೆ ಬರಬೇಕಾಗಿತ್ತು. ತಡವಾದರೂ ಚಿಂತೆಯಿಲ್ಲ ಕಣ್ಣ ತೆರೆದಿರುವುದು ಸಮಾಧಾನದ ಸಂಗತಿಯಾದರೂ ನೀಡಿದ ಸೂಚನೆಗಳು ಯಾವಾಗ ಅನುಷ್ಠಾನಗೊಳ್ಳುತ್ತವೆ ಕಾಯ್ದು ನೋಡಬೇಕಷ್ಟೆ.

ಅಸ್ಮಿತೆ ವರದಿ, ಅ.14: ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ ಪೊಲೀಸ್ ಆಯುಕ್ತ ಭೋರಸೆ ಭೂಷಣ ಗುಲಾಬರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಒಳಗೊಂಡು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜರುಗಿದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ರಸ್ತೆ ಅಪಘಾತಗಳ ನಿಯಂತ್ರಣದ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆದು ಅನೇಕ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ನಗರ ಸೇರಿದಂತೆ ಜಿಲ್ಲೆಯಾದ್ಯಂತ ರಸ್ತೆ ಸುರಕ್ಷತೆ ಇಲ್ಲದೆ ಸಾರ್ವಜನಿಕರು ತುಂಬಾ ದಿನಗಳಿಂದ ನಿತ್ಯ ಪರದಾಡುತ್ತ ಜೀವ ಅಂಗೈಯಲ್ಲಿ ಹಿಡಿದು ಹರಸಾಹಸದ ಪ್ರಯಾಣ ನಡೆಸುತ್ತಿದ್ದಾರೆ. ಈ ಬಗೆಯ ಸಭೆ ಎಂದೋ ನಡೆದು ನೀಡಿದ ಸೂಚನೆಗಳು ಕಾರ್ಯರೂಪಕ್ಕೆ ಬರಬೇಕಾಗಿತ್ತು. ತಡವಾದರೂ ಚಿಂತೆಯಿಲ್ಲ ಕಣ್ಣ ತೆರೆದಿರುವುದು ಸಮಾಧಾನದ ಸಂಗತಿಯಾದರೂ ನೀಡಿದ ಸೂಚನೆಗಳು ಯಾವಾಗ ಅನುಷ್ಠಾನಗೊಳ್ಳುತ್ತವೆ ಕಾಯ್ದು ನೋಡಬೇಕಷ್ಟೆ.

ಸಭೆಯಲ್ಲಿ ಬಂದ ಸಲಹೆ ಸೂಚನೆಗಳು:

ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡುವ ಉದ್ದೇಶದಿಂದ ‘ಝೀರೋ ಫ್ಯಾಟಲಿಟಿ ಡಿಸ್ಟ್ರಿಕ್ಟ್’ ಮಾದರಿಯಲ್ಲಿ ಕ್ರಿಯಾ ಯೋಜನೆ ರೂಪಿಸಲು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ ನಿರಂತರವಾಗಿ ಅಪಘಾತ ಸಂಭವಿಸುವ ಸ್ಥಳಗಳನ್ನು ನಿಖರವಾಗಿ ಗುರುತಿಸಿ, ಆ ದತ್ತಾಂಶವನ್ನು ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ತಕ್ಷಣ ಹಸ್ತಾಂತರಿಸಬೇಕು. ಜಿಲ್ಲೆಯಲ್ಲಿನ ಕಪ್ಪು ಸ್ಥಳಗಳ ಪಟ್ಟಿ ಮಾಡುವಂತಹ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಅವರಿಂದ ಮಾಹಿತಿ ಪಡೆಯುವಂತೆ ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗಾಗಿ ಅಗೆಯಲಾದ ರಸ್ತೆಗಳನ್ನುದುರಸ್ತಿಗೊಳಿಸಿರುವುದಿಲ್ಲ. ಈ ಕುರಿತು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಜರುಗಿಸಿ ರಸ್ತೆ ದುರಸ್ತಿಗೆ ತ್ವರಿತವಾಗಿ ಕ್ರಮ ವಹಿಸಲು ಸೂಚಿಸಿದರು.

ಅಪಘಾತಕ್ಕೊಳಗಾದವರಿಗೆ ತಕ್ಷಣ ಸೂಕ್ತ ಚಿಕಿತ್ಸೆ ದೊರಕಲು ಅನುವಾಗುವಂತೆ ಪಿ.ಎಂ.ರಾಹತ್ ಯೋಜನೆಯಡಿ ಆಸ್ಪತ್ರೆಗಳ ಎಂಪ್ಯಾನೆಲ್ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಪೋಲಿಸ್ ಆಯುಕ್ತ ಭೋರಸೆ ಭೂಷಣ ಗುಲಾಬರಾವ್, ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಾಕತಿ ಹಾಗೂ ಬಡೇಕೊಳ್ಳಮಠದ ಹತ್ತಿರ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಆ ಸ್ಥಳಗಳಲ್ಲಿ ಬೆಳಕಿನ ವ್ಯವಸ್ಥೆ ಹಾಗೂ ಸೂಚನಾ ಫಲಕಗಳನ್ನು ತ್ವರಿತವಾಗಿ ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಗ್ರಾಮೀಣ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳ ಮೂಲಕ ಹಾದು ಹೋಗುವಂತಹ ಹೆದ್ದಾರಿ, ಮುಖ್ಯ ರಸ್ತೆಗಳಲ್ಲಿ ಬೆಳಕಿನ ಹಾಗೂ ವೈಜ್ಞಾನಿಕವಾಗಿ ವೇಗ ನಿಯಂತ್ರಕಗಳನ್ನು ಅಳವಡಿಸುವುದರ ಮೂಲಕ ಅಪಘಾತಗಳನ್ನು ನಿಯಂತ್ರಿಸಲು ತಿಳಿಸಿದರು.

ನಗರದಲ್ಲಿ ರಾತ್ರಿ ವೇಳೆಯಲ್ಲಿ ಗೋಚರಿಸದ ಸ್ಪೀಡ್ ಬ್ರೇಕರ್‌ಗಳಿಂದಾಗಿ (ವೇಗ ನಿಯಂತ್ರಕಗಳು) ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದು, ನಗರದಾದ್ಯಂತ ಇರುವ ಎಲ್ಲಾ ಸ್ಪೀಡ್ ಬ್ರೇಕರ್‌ಗಳ ಸಮೀಕ್ಷೆ ಜರುಗಿಸಿ, ಸಾರ್ವಜನಿಕರಿಗೆ ಸ್ಪಷ್ಟವಾಗಿ ಗೋಚರಿಸುವಂತಹ ಬಣ್ಣ ಬಳಿಯುವ ಕಾರ್ಯವನ್ನು ಕೈಗೊಳ್ಳಲು ಲೋಕೋಪಯೋಗಿ ಮತ್ತು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆದ್ದಾರಿ ಸುರಕ್ಷತೆಯ ಜವಾಬ್ದಾರಿಯಿಂದ ಟೋಲ್ ಸಂಗ್ರಹಣಾ ಏಜೆನ್ಸಿಗಳು ಹಿಂದೆ ಸರಿಯುವಂತಿಲ್ಲ. ರಸ್ತೆ ನಿರ್ವಹಣೆ ಮತ್ತು ಸುರಕ್ಷತೆಯ ಹೊಣೆಯನ್ನು ಟೋಲ್ ನಿರ್ವಹಣೆದಾರರು ನಿರ್ವಹಿಸಬೇಕು. ರಸ್ತೆಯ ಗುಂಡಿಗಳು, ಪ್ಯಾಚ್ ವರ್ಕ್ ಗಳ ಸರಿಯಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಪ್ರಯಾಣಿಕರ ಸುರಕ್ಷತೆಗೆ ಪ್ರಥಮಾದ್ಯತೆ ನೀಡಬೇಕು. ಅಪಘಾತಕ್ಕೊಳಗಾದ ಸಂತ್ರಸ್ತರ ವಿಮೆ ವಿವರಗಳು ಹಾಗೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದ ಅಂಕಿ-ಅಂಶಗಳನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ