ಬಾಲ ಕಾರ್ಮಿಕತೆಯ ಜೀವಂತಿಕೆಗೆ ಇಲಾಖೆಗಳ ಸಮನ್ವಯತೆ ಕೊರತೆ - ನ್ಯಾಯಾಧೀಶ ಕೆ.ಎನ್. ಶಿವಕುಮಾರ
ಸ್ವಯಂ ಸೇವಕಿ ಸುಶೀಲಾ, ಸಾಮಾಜಿಕ ತಾರತಮ್ಯ ನೀತಿ ಅನುಸರಣೆ ಬಾಲಕಾರ್ಮಿಕ ಜೀವಂತಿಕೆಗೆ ಕಾರಣವಾಗಿದೆ. ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದು ಅಗತ್ಯವಿದೆ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾವಲು ಸಮಿತಿ ರಚನೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಬಾಲ ಕಾರ್ಮಿಕತೆಯ ಜೀವಂತಿಕೆಗೆ ಇಲಾಖೆಗಳ ಸಮನ್ವಯತೆ ಕೊರತೆ - ನ್ಯಾಯಾಧೀಶ ಕೆ.ಎನ್. ಶಿವಕುಮಾರ
--
ಕಳೆದ 40 ವರ್ಷಗಳಿಂದ ಬಾಲ ಕಾರ್ಮಿಕ ನಿರ್ಮೂಲನೆ ಕಾಯ್ದೆ ಜಾರಿಯಲ್ಲಿದ್ದರೂ ಈಗಲೂ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುತ್ತಿರುವುದು ವಿಷಾದನೀಯ. ಸರ್ಕಾರಿ ಇಲಾಖೆಗಳ ಪರಸ್ಪರ ಸಮನ್ವಯತೆಯ ಕಾರ್ಯಸಾಧನೆಯ ಕೊರತೆಯಿಂದಾಗಿ ಬಾಲಕಾರ್ಮಿಕ ಪದ್ಧತಿ ಜೀವಂತವಾಗಿದೆ ಎಂದು ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಕೆ.ಎನ್. ಶಿವಕುಮಾರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲಾ ಆಡಳಿತ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಇಂದು ಬೆಳಗಾವಿಯಲ್ಲಿ "ಬಾಲ ಕಾರ್ಮಿಕರಿಗೆ ರೆಡ್ ಕಾರ್ಡ್ -ಮಕ್ಕಳಿಗೆ ನ್ಯಾಯಯುತ ಬಾಲ್ಯ -ವಯಸ್ಕರಿಗೆ ಘನತೆಯ ಉದ್ಯೋಗ" ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಬಾಲಕಾರ್ಮಿಕ ದಿನಾಚರಣೆಯನ್ನ ಉದ್ಘಾಟಿಸಿ ಅವರು ಮಾತನಾಡಿದರು.

ಸಂಬಂಧಿಸಿದ ವಿವಿಧ ಇಲಾಖೆಗಳು ಪರಸ್ಪರ ಸಂಯೋಗ ಸಾಧಿಸಿ ಕೆಲಸ ಮಾಡಿದರೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯವಿದೆ. ಇದಕ್ಕೆ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕೈಜೋಡಿಸಿದರೆ ಬಾಲಕಾರ್ಮಿಕ ವಿರೋಧಿ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯವಾಗುತ್ತದೆ. ಅನುಕೂಲಸ್ಥ ಕುಟುಂಬದ ಮಕ್ಕಳು ಬಾಲಕಾರ್ಮಿಕರಾಗುವುದಿಲ್ಲ. ಬಡತನ, ಆರ್ಥಿಕ ಹೀನತೆಯ ಕುಟುಂಬದ ಮಕ್ಕಳು ಬದುಕು ನಿರ್ವಹಣೆಯ ಕಾರಣ ಕೆಲಸ ಇಳಿಯುತ್ತಾರೆ. ಕಾರಣ ಬಾಲ ಕಾರ್ಮಿಕರಿಗೆ ಮತ್ತು ಅವರ ಕುಟುಂಬ ವರ್ಗಕ್ಕೆ ಸೂಕ್ತ ಪುನರ್ವಸತಿ ಕಲ್ಪಿಸುವುದು ಅಗತ್ಯ ಆದ್ಯತೆ ಆಗಬೇಕು ಎಂದು ಸಲಹೆ ನೀಡಿದರು.
ಮಾದ್ಯಮಗಳೊಂದಿಗೆ ಮಾತನಾಡಿದ ಬೆಳಗಾವಿ ಜಿಲ್ಲಾ ಆರೋಗ್ಯೋಧಿಕಾರಿ ಡಾ. ಈಶ್ವರ ಗಡಾದ, ಮಕ್ಕಳು ದುಶ್ಚಟಗಳಿಗೆ ಒಳಗಾಗಿ ಅದರ ನಿರ್ವಹಣೆಗೆ ಕೆಲಸಕ್ಕೆ ಇಳಿಯುತ್ತಾರೆ ಎಂದು ಬಾಲ ಕಾರ್ಮಿಕ ಪದ್ಧತಿಯ ಜೀವಂತಿಕೆಗೆ ವ್ಯಾಖ್ಯಾನ ನೀಡಿದ್ದಾರೆ. ಮಕ್ಕಳನ್ನು ದುಶ್ಚಟದಿಂದ ಮುಕ್ತಗೊಳಿಸಿ ಕುಟುಂಬ ವರ್ಗದವರು ಅವರ ಸರ್ವತೋಮುಖ ಬೆಳವಣಿಗೆಗೆ ಆದ್ಯತೆ ನೀಡಿದರೆ ನಿಯಂತ್ರಣ ಸಾಧ್ಯವಿದೆ ಎಂದು ಪರಿಹಾರೋಪಾಯ ಸೂಚಿಸಿದ್ದಾರೆ.
ಸ್ವಯಂ ಸೇವಕಿ ಸುಶೀಲಾ, ಸಾಮಾಜಿಕ ತಾರತಮ್ಯ ನೀತಿ ಅನುಸರಣೆ ಬಾಲಕಾರ್ಮಿಕ ಜೀವಂತಿಕೆಗೆ ಕಾರಣವಾಗಿದೆ. ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದು ಅಗತ್ಯವಿದೆ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾವಲು ಸಮಿತಿ ರಚನೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಉಪ ಕಾರ್ಮಿಕ ಆಯುಕ್ತ ಡಿ.ಜಿ. ನಾಗೇಶ್, ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ. ನಾಗರಾಜ್, ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ ಸೇರಿದಂತೆ ಅನೇಕ ಅಣ್ಯರು ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
**
ಈ ಲೇಖನ ಹಂಚಿಕೊಳ್ಳಿ