ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 54 ವೀಕ್ಷಣೆಗಳು

ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ

ಅಸ್ಮಿತೆ ಸುದ್ದಿ : ಜೂನ ತಿಂಗಳಲ್ಲಿ ಆಗಬೇಕಾದ ಮುಂಗಾರು ಮಳೆ ತಡವಾಗಿ ಆರಂಭವಾಗಿದ್ದು, ಕಳೆದ ಮರ‍್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಕಾರಣ ಬೆಳಗಾವಿ ಜಿಲ್ಲೆಯಲ್ಲಿ ಉಂಟಾಗಿದ ಬರದ ಆತಂಕ ಸದ್ಯಕ್ಕೆ ನಿವಾರಣೆ ಆಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲಾ ಅಧಿಕಾರಿ ಕಚೇರಿಯಲ್ಲಿ ಇಂದು ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲೂ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮತ್ತು ಘಟ್ಟ ಪ್ರದೇಶದಲ್ಲೂ ನಿರಂತರ ಮಳೆ ಮುಂದುವರೆದಿದ್ದರಿಂದ ಜಿಲ್ಲೆಯ ಕೃಷ್ಣಾ ನದಿ ಸೇರಿದಂತೆ ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೆಯ ನದಿಗಳಿಗೆ ನೀರಿನ ಹರಿವು ಜಾಸ್ತಿಯಾಗಿದೆ. ಜೂನ ತಿಂಗಳಲ್ಲಿ ಪ್ರತಿಶತ ೨೯ ರಷ್ಟು ಮಳೆಯ ಕೊರತೆಯಿದ್ದು, ಬರದ ಆತಂಕ ಸೃಷ್ಟಿಯಾಗಿತ್ತು. ಇನ್ನೂ ನಾಲ್ಕೈದು ದಿನ ಇದೇ ರೀತಿ ಮಳೆ ಮುಂದುವರೆದರೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರಬಹುದು. ಆದರೆ ಆತಂಕ ಪಡುವ ಅವಶ್ಯಕತೆಯಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗದೇ ಹೋದರೆ ಮೋಡ ಬಿತ್ತನೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ರಾಕಸಕೊಪ್ಪದಲ್ಲಿ ನೀರಿನ ಸಂಗ್ರಹ ಆಗುತ್ತಿದ್ದು ಇನ್ನೊಂದು ವಾರ ಮಳೆಯಾದರೆ ರಾಕಸಕೊಪ್ಪ ಡ್ಯಾಮ್‌ದಲ್ಲಿ ನೀರು ಸಾಕಷ್ಟು ಪ್ರಮಾಣದಲ್ಲಿ ಆಗ್ರಹವಾಗಬಹುದು. ಮಳೆ ಆಗದ ಸಂದರ್ಭದಲ್ಲಿ ಬಿತ್ತನೆನಿಂದ ರೈತರಿಗೆ ನಷ್ಟವಾಗಿದ್ದರೆ ಆ ಬಗ್ಗೆ ಪರಿಶೀಲಿಸಿ ಪ್ರತ್ಯೇಕವಾಗಿ ಸರ್ವೆ ಮಾಡಲಾಗುವುದು ಎಂದರು.

ಕಳೆದ ನಾಲ್ಕೈದು ವರ್ಷಗಳಿಂದ ರಸ್ತೆಗಳ ರಸ್ತೆಗಳ ಅಗೆತದಿಂದ ಸಾರ್ವಜನಿಕ ತೊಂದರೆಯಾಗುತ್ತಿದೆ. ಕಾಮಗಾರಿ ಪೂರ್ಣಗೊಳಿಸಲು ಸಂಬAಧಿಸಿದ ಗುತ್ತಿಗೆದಾರರಿಗೆ ಅನೇಕ ಸಲ ಸಭೆ ನಡೆಸಿ ಸೂಚಿಸಲಾಗಿದೆ. ಆದರೆ, ಕಾಮಗಾರಿ ಬೇಗ ಪೂರ್ಣಗೊಳಿಸದಿದ್ದರೆ ಮಳೆಗಾಲದಲ್ಲಿ ಸ್ಥಗಿತಗೊಳಿಸಲಾಗುವುದು. ಸರ್ವೋಚ್ಛ ನ್ಯಾಯಲಯದ ಆದೇಶದ ಮೇರೆಗೆ ಫುಟ್ ಪಾತ್ ಅತಿಕ್ರಮಣ ತೆರವುಗೊಳಿಸಲಾಗುತ್ತಿದೆ. ತೆರುವು ಕಾರ್ಯಚರಣೆ ಮುಂಚಿತ ಸಂಬಂಧಿತರಿಗೆ ಮುಂಚಿತವಾಗಿ ನೋಟಿಸ್ ನೀಡಿ ಸೂಚನೆ ನೀಡಲು ಅಧಿಕಾರಿಗಳಿಗೆ ತಿಳಿಸುವುದಾಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ