ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 33 ವೀಕ್ಷಣೆಗಳು

ನೀರು ವ್ಯರ್ಥವಾಗದಂತೆ ಕಾಲುವೆಗಳ ತ್ವರಿತ ನಿರ್ವಹಣೆಗೆ ಸತೀಶ್ ಜಾರಕಿಹೊಳಿ ಸೂಚನೆ

ಅಸ್ಮಿತೆ ವರದಿ, ಅ.02: ರೈತರ ಹಿತದೃಷ್ಟಿಯಿಂದ ಕಾಲುವೆಯ ದುರಸ್ತಿ ಹಾಗೂ ನಿರ್ವಹಣಾ ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಯಾವುದೇ ರೀತಿಯ ನೀರಿನ ವ್ಯರ್ಥವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇಂದು ಹುಕ್ಕೇರಿ ತಾಲೂಕಿನ ಘೋಡಗೇರಿ ಸಮೀಪದ ಹಿರಣ್ಯಕೇಶಿ ನದಿಯಿಂದ ಜಿಆರ್‌ಬಿಸಿ (GRBC) ಕಾಲುವೆಗೆ ನೀರು ಎತ್ತುವ (ಲಿಫ್ಟ್) ಯೋಜನೆಯ ಪಂಪ್ ಹೌಸ್ ಸ್ಥಳಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಂಪ್ ಹೌಸ್‌ನ ಕಾರ್ಯನಿರ್ವಹಣೆ ಹಾಗೂ ನೀರು ಪೂರೈಕೆಗೆ ಸಂಬಂಧಿಸಿದ ತಾಂತ್ರಿಕ ಅಂಶಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡು ನೀರು ಪೋಲಾದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಬಳಿಕ ಘೋಡಗೇರಿ, ಮೇಲ್ಮಟ್ಟಿ, ಗೋಡಚಿನಮಲ್ಕಿ ಸೇರಿದಂತೆ ಜಿಆರ್‌ಬಿಸಿ ಕಾಲುವೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ, ಕಾಲುವೆಯ ದುರಸ್ತಿ ಕಾಮಗಾರಿಗಳು, ನೀರಿನ ಸೋರಿಕೆ (ಲೀಕೆಜ್) ಉಂಟಾಗಿರುವ ಸ್ಥಳಗಳು ಹಾಗೂ ನೀರು ಸರಾಗವಾಗಿ ಹರಿಯುವ ವ್ಯವಸ್ಥೆಯನ್ನು ಪರಿಶೀಲಿಸಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ