ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಎಸ್ ಐ ಆರ್ ಪ್ರಕ್ರಿಯೆ ಪ್ರಜಾ ತಾಂತ್ರಿಕಗೊಳ್ಳಲಿ : ಜನಪರ ಸಂಘಟನೆಗಳ ಒತ್ತಾಯ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 160 ವೀಕ್ಷಣೆಗಳು

ಎಸ್ ಐ ಆರ್ ಪ್ರಕ್ರಿಯೆ ಪ್ರಜಾ ತಾಂತ್ರಿಕಗೊಳ್ಳಲಿ : ಜನಪರ ಸಂಘಟನೆಗಳ ಒತ್ತಾಯ

ಚುನಾವಣಾ ಆಯೋಗವು ಸರ್ವಾಧಿಕಾರಿ ಧೋರಣೆಯಿಂದ ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್ ವೇರ್ ಬಳಸಬಾರದು; ಜನರಿಗೆ ಅಪೀಲ್ ಹಾಕಲು ಸೂಕ್ತ ಸಮಯಾವಕಾಶ ನೀಡಬೇಕು, ಇಲ್ಲದೇ ಹೋದಲ್ಲಿ ಕರ್ನಾಟಕದಲ್ಲಿ ಬೃಹತ್ ಜನಾಂದೋಲನವಾಗಿ ರೂಪುಗೊಳ್ಳುವುದು ಖಚಿತ ಎಂಬ ಎಚ್ಚರಿಕೆಯನ್ನು ಮನವಿ ಪತ್ರದ ಮೂಲಕ ಸಂಘಟನೆಗಳು ವ್ಯಕ್ತಪಡಿಸಿವೆ.

ಎಸ್ ಐ ಆರ್ ಪ್ರಕ್ರಿಯೆ ಪ್ರಜಾ ತಾಂತ್ರಿಕಗೊಳ್ಳಲಿ : ಜನಪರ ಸಂಘಟನೆಗಳ ಒತ್ತಾಯ

ಅಸ್ಮಿತೆ ಸುದ್ದಿ : ಎಸ್ಐಆರ್ ಪ್ರಕ್ರಿಯೆಯನ್ನು ಪ್ರಜಾತಾಂತ್ರಿಕಗೊಳಿಸಲು ನಾಗರಿಕ ಸಮಾಜದ ನಾಲ್ಕು ಪ್ರಮುಖ ಹಕ್ಕೊತ್ತಾಯಗಳನ್ನು ಪರಿಗಣಿಸಿ ರಾಜ್ಯ ಚುನಾವಣಾ ಆಯೋಗ ಉತ್ತರಿಸಬೇಕೆಂದು ಬೆಳಗಾವಿಯ ಎಸ್ ಐ ಆರ್ ವಿರೋಧಿ ಜನಪರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಚುನಾವಣಾ ಆಯೋಗಕ್ಕೆ ಮಂಗಳವಾರದಂದು ಮನವಿ ಪತ್ರ ಸಲ್ಲಿಸಲಾಯಿತು.

ಎಸ್ಐಆರ್ ವಿರೋಧಿ ಒಕ್ಕೂಟದಿಂದ ಜೂನ್ 20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಹೇಳಿದ ವಿಚಾರಗಳಿಗೆ, ಕೇಳಿದ ಪ್ರಶ್ನೆಗಳಿಗೆ ; ನಾಡಿನ ಹೆಸರಾಂತ ಸಾಹಿತಿಗಳು ಚಿಂತಕರು ಕಲಾವಿದರು ರಂಗಕರ್ಮಿಗಳು ಬರೆದ ಪತ್ರಕ್ಕೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಬರೆದಿರುವ ಪತ್ರಕ್ಕೆ ರಾಜ್ಯ ಚುನಾವಣಾ ಆಯೋಗ ಇದುವರೆಗೂ ನಾಗರಿಕ ಸಮಾಜಕ್ಕೆ ಸ್ಪಷ್ಟನೆ ಕೊಟ್ಟಿಲ್ಲ. ಈ ರೀತಿ ಪ್ರತಿಕ್ರಿಯೆ ಕೊಡದೇ ಇರುವುದು ಪ್ರಜಾತಾಂತ್ರಿಕ ನಡವಳಿಕೆ ಅಲ್ಲ. ಪ್ರಜಾ ತಾಂತ್ರಿಕ ವ್ಯವಸ್ಥೆಯಲ್ಲಿ ಪ್ರತಿಯೊಂದು ಸಾರ್ವಜನಿಕ ಸಂಸ್ಥೆಯೂ ಕೂಡ ಸಾರ್ವಜನಿಕ ಪ್ರಶ್ನೆಗಳಿಗೆ ಉತ್ತರಿಸಬೇಕಾದದ್ದು ಅದರ ಕರ್ತವ್ಯ. ಆದ್ದರಿಂದ ನೀವು ಮೂಲಭೂತ ಕರ್ತವ್ಯಗಳನ್ನು ಉಲ್ಲಂಘಿಸುತ್ತಾ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿರುವುದನ್ನು ನಾವು ಖಂಡಿಸುತ್ತೇವೆ ಎಂದು ಮನವಿಪತ್ರ ಸಲ್ಲಿಸಿ ಒತ್ತಾಯಿಸಲಾಗಿದೆ.

ಚುನಾವಣಾ ಆಯೋಗವು ಸರ್ವಾಧಿಕಾರಿ ಧೋರಣೆಯಿಂದ ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್ ವೇರ್ ಬಳಸಬಾರದು; ಜನರಿಗೆ ಅಪೀಲ್ ಹಾಕಲು ಸೂಕ್ತ ಸಮಯಾವಕಾಶ ನೀಡಬೇಕು, ಇಲ್ಲದೇ ಹೋದಲ್ಲಿ ಕರ್ನಾಟಕದಲ್ಲಿ ಬೃಹತ್ ಜನಾಂದೋಲನವಾಗಿ ರೂಪುಗೊಳ್ಳುವುದು ಖಚಿತ ಎಂಬ ಎಚ್ಚರಿಕೆಯನ್ನು ಮನವಿ ಪತ್ರದ ಮೂಲಕ ಸಂಘಟನೆಗಳು ವ್ಯಕ್ತಪಡಿಸಿವೆ.

ಬಂಡಾಯ ಸಾಹಿತ್ಯ ಸಂಘಟನೆಯ ಡಾ. ಯಲ್ಲಪ್ಪ ಹಿಮ್ಮಡಿ, ಲಿಂಗತ್ವ ಮತ್ತು ಲೈಂಗಿಕ ಬಹತ್ವಕ್ಕಾಗಿ ಚಳುವಳಿಯ ಐನಾ ಶೇಖ್, ಸಿಐಟಿಯು ಸಂಘಟನೆಯ ಮಂದಾ ನೇವಗಿ, ಎದ್ದೇಳು ಕರ್ನಾಟಕದ ಯಾಸೀನಖಾನ್ ಮಕಾನ್ದಾರ, ಎಸ್ ಡಿ ಪಿ ಐ ಸಂಘಟನೆಯ ಮೌಜ್ಜಮ್ ಮುಲ್ತಾನಿ, ಮಜ್ದುರ್ ನವನಿರ್ಮಾಣ ಸಂಘದ ಕವಿತಾ ಜಾರಕಿಹೊಳಿ, ಮಾನವ ಹಕ್ಕುಗಳ ಹೋರಾಟದ ವರ್ಷಾ ಪದ್ಮಣ್ಣವರ, ಶುಭಾಂಗಿ ನಿಕ್ಕಮ್, ರಜಿಯಾ ಬೇಗಮ್ ಶೇಖ್, ಸಾಮಾಜಿಕ ಹೋರಾಟಗಾರರಾದ ಸುನಿತಾ ಸುಭೇದಾರ, ತಾನಾಜಿ ಸಾವಂತ ಮತ್ತಿತರ ಸಂಘಟನೆಗಳ ಪ್ರಮುಖರು ನಿಯೋಗದಲ್ಲಿದ್ದರು.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ