ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ನಂದಗಡದಲ್ಲಿ  ಬ್ರಿಟಿಷ್ ರ ನೇಣುಗಂಬಕ್ಕೆ ಕೊರಳೊಡ್ಡಿದ ಏಳಜ‌ನ ಅಪ್ರತಿಮ ದೇಶಭಕ್ತರು : ಸತೀಶ್ ಜಾರಕಿಹೊಳಿ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 52 ವೀಕ್ಷಣೆಗಳು

ನಂದಗಡದಲ್ಲಿ ಬ್ರಿಟಿಷ್ ರ ನೇಣುಗಂಬಕ್ಕೆ ಕೊರಳೊಡ್ಡಿದ ಏಳಜ‌ನ ಅಪ್ರತಿಮ ದೇಶಭಕ್ತರು : ಸತೀಶ್ ಜಾರಕಿಹೊಳಿ

ಅಸ್ಮಿತೆ ವರದಿ, ಅ.೧೫: ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 80 ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿ,  ಗೌರವ ವಂದನೆ ಸ್ವೀಕರಿಸಿದರು.

ಬಳಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸ್ವಾತಂತ್ರ್ಯ ಹೋರಾಟದಲ್ಲಿ  ಬೆಳಗಾವಿ ಜಿಲ್ಲೆಯ ಪಾತ್ರವು ವಿಶೇಷವಾದದ್ದು.  ಅಪ್ರತಿಮ ಹೋರಾಟಗಾರರು, ಅಪ್ಪಟ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳನ್ನು ದೇಶಕ್ಕೆ ಕೊಡುಗೆ ನೀಡಿರುವ ಬೆಳಗಾವಿ ಜಿಲ್ಲೆಯು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು. ಕಿತ್ತೂರು ಸಂಸ್ಥಾನದಲ್ಲಿ ಸೇನಾಧಿಪತಿಯಾಗಿದ್ದ ಸಂಗೊಳ್ಳಿ ರಾಯಣ್ಣ ಹಾಗೂ ಬಾಲಾನಾಯ್ಕ ಬಿನ್ ಮಲ್ಲಾನಾಯಕ, ಕಲಬಸಪ್ಪ ಬಿನ್ ಕಲ್ಲಪ್ಪ, ಭೀಮ ಜಿಡ್ಡಿಮನಿ, ಅಪ್ಪಾಜಿ ಕೆಂಚಾನಾಯಕ, ಬಸವಲಿಂಗಪ್ಪ ಮತ್ತು ಕೆಂಚಪ್ಪ ಬಿನ್ ರುದ್ರಪ್ಪ ಈ ಏಳು ಜನರು ಆಂಗ್ಲರ ಬಂದೂಕುಗಳಿಗೆ ಬೆದರದೇ ತಾಯ್ನಾಡಿನ ಸ್ವಾತಂತ್ರಕ್ಕಾಗಿ ನಂದಗಡದಲ್ಲಿ ನೇಣುಗಂಬಕ್ಕೇರಿದ ಅಪ್ರತಿಮ ದೇಶಭಕ್ತರು.

ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ ೧೫ರಂದು ವೀರಮರಣವನ್ನಪ್ಪಿದ್ದು ಜನವರಿ ೨೬ ಎಂದು ಸ್ಮರಿಸಿಕೊಂಡರು.

ಕಿತ್ತೂರು ರಾಣಿ ಚೆನ್ನಮ್ಮ ಮೊಳಗಿಸಿದ ಸ್ವಾತಂತ್ರ್ಯದ ಕಹಳೆಯು ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತು. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದ ಚೆನ್ನಮ್ಮ, ಆಂಗ್ಲರ ಈಸ್ಟ್ ಇಂಡಿಯಾ ಕಂಪೆನಿಗೆ ದುಸ್ವಪ್ನವಾಗಿ ಕಾಡಿದಳು ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮತ್ತೊಬ್ಬ ಮಹನೀಯರು ಶ್ರೀ ಗಂಗಾಧರ ದೇಶಪಾಂಡೆ. ‘ಕರ್ನಾಟಕದ ಸಿಂಹ’ ಹಾಗೂ ‘ಕರ್ನಾಟಕದ ಖಾದಿ ಭಗೀರಥ’ ಎಂದು ಗುರುತಿಸಿಕೊಂಡಿದ್ದ ದೇಶಪಾಂಡೆಯವರ ಕೊಡುಗೆ ಅಪಾರ. ಇವರ ಜತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸ್ವಾತಂತ್ರö್ಯ ಹೋರಾಟದಲ್ಲಿ ಭಾಗವಹಿಸಿದ್ದ ಅನೇಕರನ್ನು ಇಂದು ನಾವು ನೆನಪಿಸಿಕೊಳ್ಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ನಂತರ, ಶಿಕ್ಷಣ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.

*****

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ