ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ವಿಬಿ-ಜಿ ರಾಮ್ ಜಿ’ ಯೋಜನೆ ಜಾರಿ:99.44 ಕೂಲಿಕಾರರಿಗೆ ಉದ್ಯೋಗಾವಕಾಶ - ಸಿಇಒ ರಾಹುಲ್ ಶಿಂಧೆ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 61 ವೀಕ್ಷಣೆಗಳು

ವಿಬಿ-ಜಿ ರಾಮ್ ಜಿ’ ಯೋಜನೆ ಜಾರಿ:99.44 ಕೂಲಿಕಾರರಿಗೆ ಉದ್ಯೋಗಾವಕಾಶ - ಸಿಇಒ ರಾಹುಲ್ ಶಿಂಧೆ

ಅಸ್ಮಿತೆ ಸುದ್ದಿ : ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕಾ ಮಿಷನ್ (VB-G RAM G) ಯೋಜನೆಯು ಜುಲೈ-1 ರಿಂದ ಜಾರಿಯಾಗಿದ್ದು,ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಶತ 99.44% ಕೂಲಿಕಾರರ ಇ ಕೆ ವೈಸಿ ಮಾನ್ಯತೆ ಪಡೆದು 125 ದಿನಗಳ ಉದ್ಯೋಗಾವಕಾಶ ಪಡೆಯಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ ‌ಮುಖ್ಯ‌ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.

ನೂತನ ಯೋಜನೆ ಅನ್ವಯ ಈ ಹಿಂದೆ ಕೂಲಿಕಾರರಿಗೆ ನಿಗದಿಪಡಿಸಲಾಗಿದ್ದ ಕೂಲಿ ಮೊತ್ತವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಒಬ್ಬ ಕೂಲಿಕಾರರಿಗೆ ಪ್ರತಿ ದಿನಕ್ಕೆ ರೂ.370 ಇದ್ದ ಕೂಲಿ ದರವನ್ನು ರೂ.12 ಹೆಚ್ಚಿಸಲಾಗಿದ್ದು, ಜು.1 ರಿಂದ ರೂ.382 ಕೂಲಿ ದರ ನಿಗದಿಪಡಿಸಲಾಗಿದೆ. ಪ್ರತಿ ಕುಟುಂಬಕ್ಕೆ ವರ್ಷಕ್ಕೆ 100 ದಿನಗಳ ಬದಲಾಗಿ ಈಗ 125 ದಿನಗಳವರೆಗೆ ಉದ್ಯೋಗ ನೀಡಲಾಗುವುದು. ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಪ್ರಕಟಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಶೇ.99.44 ರಷ್ಟು ಸಕ್ರಿಯ ಕೂಲಿಕಾರರ ಇ-ಕೆವೈಸಿಯನ್ನು ಈಗಾಗಲೇ ಕೈಗೊಳ್ಳಲಾಗಿದೆ. ಅದೇ ರೀತಿ ಶೇ.89.78 ರಷ್ಟು ನೋಂದಾಯಿತ ಎಲ್ಲ ಕೂಲಿಕಾರರ ಇ-ಕೆವೈಸಿಯನ್ನು ಕೂಡ ಕೈಗೊಳ್ಳಲಾಗಿದೆ. ವಲಸೆ ಹಾಗೂ ತಾಂತ್ರಿಕ ಕಾರಣದಿಂದ ಕೆಲವು ಕೂಲಿಕಾರರ ಇ-ಕೆವೈಸಿ ಬಾಕಿ ಇದ್ದು, ಅದಕ್ಕೂ ಕ್ರಮವಹಿಸಲಾಗುತ್ತಿದೆ. ಇದರಿಂದ ಕೂಲಿಕಾರರ ಎನ್.ಎಮ್.ಎಮ್.ಎಸ್. ಹಾಜರಾತಿಯಲ್ಲಿ ಇನ್ನೂ ಹೆಚ್ಚಿನ ಪಾರದರ್ಶಕತೆ ಕಂಡುಬರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ