ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಡಗರ ಸಂಭ್ರಮದಿಂದ ಯಾತ್ರಾ ಸುವಿಧಾ ದಿವಸ್ ಅಚರಣೆ
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಡಗರ ಸಂಭ್ರಮದಿಂದ ಯಾತ್ರಾ ಸುವಿಧಾ ದಿವಸ್ ಅಚರಣೆ
**
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ಭಾರತೀಯ ವಿಮಾನಯಾನ ಪ್ರಾಧಿಕಾರದ ಆಶ್ರಯದಲ್ಲಿ ಯಾತ್ರಾ ಸುವಿಧಾ ದಿವಸ್ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಸಂಸದ ಜಗದೀಶ ಶೆಟ್ಟರ ಅವರು, ಏಕ್ ಪೇಡ್ ಮಾ ಕೆ ನಾಮ್ ಪರ್ ಯೋಜನೆಯಡಿಯಲ್ಲಿ ವಿಮಾನ ನಿಲ್ದಾಣದಲ್ಲಿ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ಕಾಯ್ ತರಬೇತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಕನ್ನಡ ಮತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಆಕರ್ಷಕ ಜಾನಪದ ನೃತ್ಯ, ಗಾಯನ, ರಂಗೋಲಿ ಸ್ಪರ್ಧೆಗಳು ವಿಶೇಷ ಗಮನ ಸೆಳೆದವು. ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ಚಿಕತ್ಸೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ದಿನವಿಡಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹಮ್ಮಿಕೊಳ್ಳಾಗಿತ್ತು.

ನಂತರ ಸಂಸದ ಜಗದೀಶ ಶೆಟ್ಟರ ಮಾತನಾಡಿ, ಪ್ರಯಾಣಿಕರಿಗೆ ವಿಮಾನ ಯಾನ ಪ್ರಾಧಿಕಾರದ ಮೂಲಕ ನೀಡಲಾಗುತ್ತಿರುವ ಸೌಕರ್ಯ ಹಾಗೂ ಸೌಲಭ್ಯಗಳನ್ನು ಪರಿಚಯಿಸುವ ದೃಷ್ಟಿಯಿಂದ ದೇಶದ ಎಲ್ಲಡೆ ಯಾತ್ರಾ ಸುವಿಧಾ ದಿವಸ್ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಉತ್ತರ ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣವಾದ ಬೆಳಗಾವಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಿಲ್ದಾಣವನ್ನುಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುವ ನಿಟ್ಟಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು ಇನ್ನೆರಡು ತಿಂಗಳಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೆ ಗೊಳ್ಳಲಿದೆ. ವಿವಿಧ ಸಂಸ್ಥೆಯ ಇನ್ನೂ ಹೆಚ್ಚಿನ ವಿಮಾನಗಳ ಹಾರಾಟಕ್ಕೆ ಅವಕಾಶ ದೊರೆಯಲಿದೆ ಎಂದು ತಿಳಿಸಿದರು.
ಬೆಳಗಾವಿ ವಿಮಾನ ನಿಲ್ದಾಣ ನಿರ್ದೇಶಕ ಎಸ್. ತ್ಯಾಗರಾಜ್, ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ವಿಮಾನ ನಿಲ್ದಾಣದ ಅಭಿವೃದ್ಧಿಯ ಕಾಮಗರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ “ಕಲಾ ನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮದ ಅಡಿ, ವಿಮಾನ ನಿಲ್ದಾಣದ ಸಹಯೋಗದಲ್ಲಿ ಆಕರ್ಷಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಾರತ ದೇಶದ ಸಾಂಸ್ಕೃತಿಕ ವೈವಿದ್ಯತೆಯನ್ನು ಸಾರುವ ಕಲೆಗಳ ಬಗ್ಗೆ ಇಂದಿನ ತಲೆಮಾರು ಅರಿತುಕೊಂಡು ಉಳಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಆಚರಣೆ

***
ಈ ಲೇಖನ ಹಂಚಿಕೊಳ್ಳಿ