ಬ್ರೇಕಿಂಗ್
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
11 ಜುಲೈ 2026
ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ   ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ
📄 ಕರ್ನಾಟಕ ಸುದ್ದಿ
Dr. K N Doddmani · · 37 ವೀಕ್ಷಣೆಗಳು

ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ

ಗಡಿ ದಾವೆಯನ್ನು ಪ್ರಾಥಮಿಕ ಹಂತದಲ್ಲಿಯೇ ನ್ಯಾಯಾಲಯವು ತಿರಸ್ಕರಿಸುವಂತೆ ಸೂಕ್ತ ಕಾನೂನು ಕ್ರಮವನ್ನು ರಾಜ್ಯ ಸರಕಾರ ಕೈಕೊಳ್ಳಬೇಕು. ಬೆಳಗಾವಿ ಗಡಿಗೆ ಸಂಬಂಧಿಸಿದಂತೆ ರಚಿಸಲಾದ ಗಡಿ ಸಂರಕ್ಷಣಾ ಆಯೋಗ ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿದ್ದು ಅದನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕು - ಆಗ್ರಹ

ಅಸ್ಮಿತೆ ಸುದ್ದಿ : ಗಡಿ ವಿಷಯವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿರುವ  ಬೆಳಗಾವಿ ಜಿಲ್ಲಾ ಕನ್ನಡಪರ ಸಂಘಟನೆಗಳು “ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಇದಕ್ಕೆ “ಮಹಾಜನ ವರದಿಯೇ ಅಂತಿಮ” ಎಂಬ ವಾದ ಮಂಡಿಸುತ್ತ, ಒತ್ತಾಯಿಸುತ್ತ ಬಂದಿರುವ ಸಂಘಟನೆಗಳು ಬೆಳಗಾವಿ ಹಿನ್ನಲೆಯಲ್ಲಿ  ಸರ್ಕಾರವನ್ನು ಎಚ್ಚರಿಸುತ್ತ, ಕಾನೂನಾತ್ಮಕ ಕೆಲಸ ಮಾಡುವಂತೆ ಒತ್ತಾಯಿಸುತ್ತಲೇ ಬಂದಿವೆ. ಬೆಳಗಾವಿ ಮಹಾನಗರ ಪಾಲಿಕೆ ಈ ಬಗ್ಗೆ ಠರಾವು ಹೊರಡಿಸುವಂತೆ ಇನ್ನಿಲ್ಲದಂತೆ ಆಗ್ರಹಿಸುತ್ತಿವೆ. ಇದಕ್ಕೆ ಆಡಳಿತ ವ್ಯವಸ್ಥೆ ಮತ್ತು ಸರಕಾರ ಜಾಣ ಮೌನ ವಹಿಸಿದ್ದರೂ ಸಂಘಟನೆಗಳು ಮಾತ್ರ ಗಟ್ಟಿಯಾದ ಧ್ವನಿ ಎತ್ತುತ್ತಲೇ ಇವೆ.

ಗಡಿ ವಿಷಯದ ಕಾನೂನಾತ್ಮಕ ಹೋರಾಟದ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸರ್ಕಾರ  ನಡೆಸಿದ ಹೊಸ ಬೆಳವಣಿಗೆಯ ಹಿನ್ನಲೆಯಲ್ಲಿ ಕಿತ್ತೂರು ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಮಹಾದೇವ ತಳವಾರ ಅವರ ಅಧ್ಯಕ್ಷತೆಯಲ್ಲಿ  ಕನ್ನಡಪರ ಸಂಘಟನೆಗಳ ಸಮಾನ ಮನಸ್ಸುಗಳು ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸಭೆ ಸೇರಿ ಗಡಿ ವಿಷಯದ ಹಿನ್ನಲೆಯಲ್ಲಿ ಸರಕಾರ  ತೆಗೆದುಕೊಳ್ಳಬೇಕಾದ ನಿರ್ಧಾರದ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಕೆಲ ಮಹತ್ವದ ನಿರ್ಣಯಗಳನ್ನು ಕೈಗೊಂಡಿವೆ. ನಿರ್ಣಯದ ಪ್ರತಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಲಾಗಿದೆ.

೨೦೦೪ ರಲ್ಲಿ ಮಹಾರಾಷ್ಟ್ರ ಸರಕಾರ ಸುಪ್ರೀಮ್ ಕೋರ್ಟಿನಲ್ಲಿ ಸಲ್ಲಿಸಿರುವ ಗಡಿ ವಿವಾದ ದಾವೆಯು ಇನ್ನೂ ವಿಚಾರಣೆಗೆ ಅಂಗೀಕಾರವಾಗಿಲ್ಲ. ಈ ದಾವೆಯನ್ನು ಪ್ರಾಥಮಿಕ ಹಂತದಲ್ಲಿಯೇ ನ್ಯಾಯಾಲಯವು ತಿರಸ್ಕರಿಸುವಂತೆ ಸೂಕ್ತ ಕಾನೂನು ಕ್ರಮವನ್ನು ರಾಜ್ಯ ಸರಕಾರ ಕೈಕೊಳ್ಳಬೇಕು. ಬೆಳಗಾವಿ ಗಡಿಗೆ ಸಂಬಂಧಿಸಿದಂತೆ ರಚಿಸಲಾದ ಗಡಿ ಸಂರಕ್ಷಣಾ ಆಯೋಗ ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿದ್ದು ಅದನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕು. ಆಯೋಗದ ಅಧ್ಯಕ್ಷರನ್ನಾಗಿ ಕಿತ್ತೂರು ಕರ್ನಾಟಕದ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನೇಮಿಸಬೇಕು. ಗಡಿ ವಿವಾದ ವಿಷಯದಲ್ಲಿ ಸುಪ್ರೀಮ್ ಕೋರ್ಟಿನ ಹಿರಿಯ ನ್ಯಾಯವಾದಿ ಮೋಹನ ಕಾತರಕಿ ಹಾಗೂ ಬೆಳಗಾವಿಯ ಕನ್ನಡಪರ ಹಿರಿಯ ಹೋರಾಟಗಾರ  ಅಶೋಕ ಚಂದರಗಿ ಅವರನ್ನು ರಾಜ್ಯ ಸರಕಾರ ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕು ಎಂದು ನಿರ್ಣಯದಲ್ಲಿ ಒಂದಾಗಿದೆ.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ, ವಿರೋಧಿ ಪಕ್ಷಗಳ ನಾಯಕರನ್ನೊಳಗೊಂಡ, ಉನ್ನತಾಧಿಕಾರ ಸಮಿತಿಯನ್ನು ರಚಿಸಲಾಗಿದೆ. ಇಬ್ಬರು ಸಂಪುಟ ದರ್ಜೆಯ ಸಚಿವರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಓರ್ವ ಸಂಸದರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಮಾದರಿಯಲ್ಲಿ ಕರ್ನಾಟದಲ್ಲೂ ಸಹ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚನೆಯಾಗಬೇಕು. ಪೂರ್ಣ ಪ್ರಮಾಣದ ಸಂಪುಟ ರಚನೆಯ ನಂತರ ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಬೇಕು. ಅಲ್ಲದೇ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಸದಸ್ಯರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವ ಮೂಲಕ ಗಡಿ ವಿವಾದ ಸಂಬಂಧ ಕೇಂದ್ರ ಸರಕಾರದ ಮೇಲೆ ನಿರಂತರ ಒತ್ತಡ ತರುವ ಕೆಲಸ ಮಾಡಬೇಕು. ಮುಖ್ಯಮಂತ್ರಿಯವರು ಉನ್ನತ ಮಟ್ಟದ ಸಭೆಯೊಂದನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸುವುದರ ಮೂಲಕ ಮಹಾರಾಷ್ಟ್ರಕ್ಕೆ ತಕ್ಕ ಸಂದೇಶ ಕಳುಹಿಸಲು ಮುಂದಾಗಬೇಕೆಂದು ಆಗ್ರಹಿಸಲಾಗಿದೆ.

 ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸುವ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳ ಅಭಿಪ್ರಾಯ ಕೋರಿ ಪಾಲಿಕೆಯ ಮಹಾಪೌರರು ಪತ್ರ ಬರೆದಿದ್ದರು. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಅಭಿಪ್ರಾಯ ಕೇಳಿದ್ದರು. ನಿರ್ದೇಶಕ ತಮ್ಮ ಅಭಿಪ್ರಾಯ ನೀಡದೇ ಬೆಳಗಾವಿ ಜಿಲ್ಲಾಧಿಕಾರಿಗೆ ಪತ್ರ ಬರೆದು ವರದಿ ಕೇಳಿದರು. ಬೆಳಗಾವಿ ಜಿಲ್ಲಾಧಿಕಾರಿ ತಮ್ಮ ಅಭಿಪ್ರಾಯ ನೀಡದೆ ಪಾಲಿಕೆಯ ಆಯುಕ್ತರಿಗೆ ಪತ್ರ ಬರೆದು ವರದಿ ಕೇಳಿದರು. ಕನ್ನಡ ಸಂಘಟನೆಗಳು ನೂರು ದಿನಗಳಿಂದ ಯಾರ ವಿರುದ್ಧ ಹೋರಾಟ ನಡೆಸುತ್ತ ಬಂದಿವೆಯೋ ಅದೇ ಪಾಲಿಕೆಯ ಅಭಿಪ್ರಾಯ ಕೇಳಿರುವುದು ಅಧಿಕಾರಿಗಳ ಕುಚೇಷ್ಠೆ ಹಾಗೂ ಜವಬ್ದಾರಿಯಿಂದ ನುಣುಚಿಕೊಳ್ಳುವ ಹೊಣೆಗೇಡಿ ವರ್ತನೆಯಾಗಿದೆ. ಈ ಸಂಬಂಧ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಕಂಡು ಚರ್ಚಿಸಲಾಗುವುದು. ಅಧಿಕಾರಿಗಳ ಹೊಣೆಗೇಡಿ ವರ್ತನೆಯನ್ನು ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲು ನಿರ್ಧರಿಸಲಾಗಿದೆ ಎಂದು ಸೂಚಿಸಲಾಗಿದೆ.

ಮೇ ೧೩ ರ ಪಾಲಿಕೆಯ ಸಭೆಯಲ್ಲಿ ಮಹಾಪೌರ ರೂಲಿಂಗ್ ನೀಡಿ ಗೊತ್ತುವಳಿ ಸ್ವೀಕರಿಸುವ ಸಂಬಂಧ ರಾಜ್ಯ ಸರಕಾರದ ಅಭಿಪ್ರಾಯ ಕೇಳಿರುವುದು ನಿಯಮ ಬಾಹಿರವಾಗಿದೆಯೆಂದು ಸುಪ್ರೀಮ್ ಕೋರ್ಟಿನ ಹಿರಿಯ ನ್ಯಾಯವಾದಿ  ಮೋಹನ ಕಾತರಕಿ ಅವರು ಸ್ಪಷ್ಟ ಅಭಿಪ್ರಾಯ ಕೊಟ್ಟಿದ್ದಾರೆ. ಇದೆಲ್ಲ ಕುಂಟ ನೆಪಗಳು ಮಾತ್ರ. ಈ ಮೊದಲು ಯಾವುದೇ ಗೊತ್ತುವಳಿ ಸ್ವೀಕರಿಸುವ ಮೊದಲು ರಾಜ್ಯ ಸರಕಾರದ ಅಭಿಪ್ರಾಯ ಕೇಳಿರಲಿಲ್ಲ. ೨೦೦೫ ರ ಅಕ್ಟೋಬರ್ ೨೭ ರಂದು ಮಹಾರಾಷ್ಟ್ರ ಪರವಾದ ಗೊತ್ತುವಳಿ ಸ್ವೀಕರಿಸುವ ಮುನ್ನ ಸರಕಾರದ ಅಭಿಪ್ರಾಯವನ್ನು ಕೇಳಲಾಗಿಲ್ಲ. ಆ ಗೊತ್ತುವಳಿಯನ್ನು ರಾಜ್ಯ ಸರಕಾರ ರದ್ದುಗೊಳಿಸಿದರೂ ಸಹ ಅದನ್ನು ಸುಪ್ರೀಮ್ ಕೋರ್ಟಿನ ಪ್ರಕರಣದಲ್ಲಿ ಸೇರಿಸಲಿಲ್ಲ. ಈಗ ಬಹುಮತದಲ್ಲಿರುವ ಬಿಜೆಪಿ ನಾಯಕರು, ಶಾಸಕರು, ಮಹಾಪೌರರು ಹಾಗೂ ಉಪಮಹಾಪೌರರು ಆದಷ್ಟು ಬೇಗನೆ ಪಾಲಿಕೆಯ ಸಭೆ ಕರೆದು ಗೊತ್ತುವಳಿ ಪಾಸು ಮಾಡುವಲ್ಲಿ ವಿಫಲರಾದರೆ ಪಾಲಿಕೆಯ ಎದಿರು ಬಿಡಾರ ಹಾಕಿ ನಿರಂತರ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ತಿಳಿಸಲಾಗಿದೆ.

ಭಾಷಾ ಅಲ್ಪಸಂಖ್ಯಾತರಾದ ಮರಾಠಿಗರಿಗೆ ಸಾಕಷ್ಟು ಸೌಲಭ್ಯಗಳನ್ನು ರಾಜ್ಯ ಸರಕಾರ ಒದಗಿಸುತ್ತಲೇ ಬಂದಿದೆ. ರಾಜಕೀಯ ಕಾರಣಗಳಿಗಾಗಿ ಎಮ್‌ಇಎಸ್ ನಾಯಕರು ಪದೇಪದೇ ಕಾಲು ಕೆದರಿ ಜಗಳ ತೆಗೆಯುವ ಪ್ರವೃತ್ತಿ ಹೊಂದಿದ್ದಾರೆ. ಅವರ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾ ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸುವುದಾಗಿ ಜಿಲ್ಲಾಧಿಕಾರಿ ಎಮ್‌ಇಎಸ್ ನಾಯಕರಿಗೆ ಭರವಸೆ ನೀಡಿದ್ದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.  ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಸಭೆಯಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ, ಕಿತ್ತೂರು ಕರ್ನಾಟಕ ಸೇನೆಯ ಯುವ ಘಟಕದ ರಾಜ್ಯಾಧ್ಯಕ್ಷ ಮಹೇಶ ಶೀಗಿಹಳ್ಳಿ, ಸರ್ವೋದಯ ಸಂಘದ ಅಧ್ಯಕ್ಷ ಶ್ರೀನಿವಾಸ ತಾಳೂಕರ, ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೆಗೌಡ ಬಣ) ಜಿಲ್ಲಾಧ್ಯಕ್ಷ ವಾಜೀದ ಹಿರೇಕೊಡಿ, ಕರುನಾಡ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲಪ್ಪ ಗುಡಗೇನಟ್ಟಿ, ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ರಾಜೂ ಕೋಲಾ, ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಶಿವರೆಡ್ಡಿ ಹುಚ್ಚರೆಡ್ಡಿ, ಕನ್ನಡ ಹೋರಾಟಗಾರರಾದ ಶರೀಫ್ ಸನದಿ, ನಾಗೇಶ ಕೊಪ್ಪದ ಕರ್ನಾಟಕ ರಕ್ಷಣಾ ವೇದಿಕೆ (ಯುವ ಸೇನೆ) ಅಧ್ಯಕ್ಷ ಬಾಳಪ್ಪ ಗುಡಗೇನಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು (ಸ್ವಾಭಿಮಾನಿ ಬಣ) ಈಶ್ವರಗೌಡ ಪಾಟೀಲ, ಗಡಿನಾಡು ಕನ್ನಡಿಗರ ಸೇನೆಯ ಜಿಲ್ಲಾಧ್ಯಕ್ಷ ಎಸ್.ಎಸ್. ಮೂಕನವರ, ನೃಪತುಂಗ ಯುವಕ ಸಂಘದ ಅಧ್ಯಕ್ಷ ಸಾಗರ ಬೋರಗಲ್ಲ, ಗಡಿನಾಡು ಕನ್ನಡಿಗರ  ಸೇನೆಯ ಶಿವಾಜಿ ಗೊರವ, ಸಂಗೀತಾ ಕಾಂಬಳೆ ಮುಂತಾದವರು ಉಪಸ್ಥಿತರಿದ್ದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಕರ್ನಾಟಕ ಸುದ್ದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನದ ಹುಂಡಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಹಣಕಾಸಿನ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಯೋಧ್ಯೆಯ ರಾಮಮಂದಿರದ ಹುಂಡಿ ಹಣ ದುರ್ಬಳಕೆ ಘಟನೆಯಿಂದ ಎಚ್ಚೆತ್ತಕೊಳ್ಳಬೇಕು. ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿಗಳ ನಿಗಾ ವಹಿಸಬೇಕು ಸಲಹೆ ನೀಡಲಾಗಿದೆ. 

Admin
ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಕರ್ನಾಟಕ ಸುದ್ದಿ

ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ

ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ - ಡಿಕೆಶಿ

Admin