ಬ್ರೇಕಿಂಗ್
ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ
16 ಜುಲೈ 2026
ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ
📄 ಕರ್ನಾಟಕ ಸುದ್ದಿ
Dr. K N Doddmani · · 56 ವೀಕ್ಷಣೆಗಳು

ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ವಾಡಿಕೆಯಂತೆ ಮುಂಗಾರು ಮಳೆಯಾಗದೇ ಹೋದರೆ ಕಂಡರಿಯದ ಭೀಕರ ಬರ ಪರಿಸ್ಥಿತಿ ಎದುರಿಸಬೇಕಾಗುತ್ತದೆ.  ಆವಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮನುಸಾರ ಬರಪರಿಸ್ಥಿತಿಯನ್ನು ಘೋಷಿಸಲಾಗುವುದು ಎಂದು ಕಂದಾಯ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ

ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಅಸ್ಮಿತೆ ಸುದ್ದಿ : ಜೂನ ತಿಂಗಳಲ್ಲಿ ಆಗಬೇಕಾದ ಮುಂಗಾರ ಮಳೆ ಇದುವರೆಗೆ ಕೇವಲ ಪ್ರತಿಶತ ೨೫ ರಿಂದ ೩೦ ರಷ್ಟ ಆಗಿದೆ. ಇದರಿಂದ ಕುಡಿಯುವ ನೀರಿನ ಕೊರತೆ ಎದುರಾಗಿದೆ. ಕೃಷಿ ಕಾರ್ಯ ಕುಂಠಿತಗೊAಡಿದೆ. ನೀರಿನ ಸಂಗ್ರಹ ಕೊನೆಯ ಹಂತ ತಲುಪಿದೆ. ಅಂತರಜಲ ಮಟ್ಟ ಇಳಿಕೆಯಾಗಿದೆ. ಈ ಎಲ್ಲ ಸಮಸ್ಯೆಗಳ ಸಮರ್ಪಕ ನಿರ್ವಹಣೆಗೆ ಸರಕಾರ ರಾಜ್ಯ ಮಟ್ಟದಲ್ಲಿ ಹಿರಿಯ ಅಧಿಕಾರಿಗಳಿಂದ ಕೂಡಿದ ಕ್ರಿಯಾ ಯೋಜನೆಯನ್ನು ನಿರ್ಮಿಸಲಾಗಿದ್ದು, ಅದನ್ನು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ, ಕಂದಾಯ ಸಚಿವ ಡಾ. ಈ.ಪರಮೇಶ್ವರ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೀರಿನ ಕೊರತೆ ಹೆಚ್ಚಾಗಿರುವುದರಿಂದ ಲಭ್ಯ ಇರುವ ನೀರನ್ನು ಕುಡಿಯುವುದಕ್ಕೆ ಮಾತ್ರ ಬಳಸಲು ಆಧ್ಯತೆ ನೀಡಲಾಗಿದೆ. ಕುಡಿಯುವ ನೀರು ಪೂರೈಸಲು ಖಾಸಗಿ ಬಾವಿ, ಕೊಳವೆ ಬಾವಿಗಳಿಂದ ಖರೀದಿ ಪೂರೈಸಲಾಗುವುದು. ಇರುವ ಕೊಳವೆ ಬಾವಿಗಳಲ್ಲಿ ನೀರು ಬತ್ತಿಹೋದರೆ ಹೊಸ ಕೊಳವೆಬಾವಿಗಳನ್ನು ಕೊರೆದು ಸಮಸ್ಯೆ ನಿವಾರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕಾಗಿ ಈಗಾಗಲೇ ರಾಜ್ಯದ ಪ್ರತಿ ಜಿಲ್ಲಾಧಿಕಾರಿ ಕಚೇರಿಗಳಲ್ಲಿ ೫ ಕೋಟಿ ರೂಪಾಯಿ ಹಣ ಲಭ್ಯವಿದೆ ಎಂದು ತಿಳಿಸಿದರು.
ವಾಡಿಕೆಯಂತೆ ಮುಂಗಾರು ಮಳೆಯಾಗದೇ ಹೋದರೆ ಕಂಡರಿಯದ ಭೀಕರ ಬರ ಪರಿಸ್ಥಿತಿ ಎದುರಿಸಬೇಕಾಗುತ್ತದೆ.  ಆವಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮನುಸಾರ ಬರಪರಿಸ್ಥಿತಿಯನ್ನು ಘೋಷಿಸಲಾಗುವುದು ಎಂದು ಸಚಿವ ಜಿ.ಪರಮೇಶ್ವರ ತಿಳಿಸಿದರು.

ಕಂದಾಯ ಇಲಾಖೆ ವತಿಯಿಂದ ನೂತನ ತಂತ್ರಜ್ಞಾನದ ಸಹಾಯದಿಂದ ಕಂದಾಯ ಗ್ರಾಮ ಘೋಷಣೆ, ಹಕ್ಕುಪತ್ರ ವಿತರಣೆಯಂತಹ ಕೆಲಸಗಳು ನಡೆಯುತ್ತಿದ್ದು, ಇದಕ್ಕೆ ಇನ್ನಷ್ಟು ತೀವ್ರತೆ ನೀಡಿ ನಿಗದ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ರಾಜ್ಯದ ದೇವಸ್ಥಾನಗಳ ಜಮೀನು ಒತ್ತುವರಿಯಾಗಿದ್ದರೆ ಪರಿಶೀಲಿಸಿ ತೆರವುಗೊಳಿಸಿ ಧಾರ್ಮಿಕ ಇಲಾಖೆಯ ವ್ಯಾಪ್ತಿಗೆ ಒಪ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.  ಎ ಮತ್ತು ಬಿ ವರ್ಗದ ದೇವಸ್ಥಾನಗಳಿಂದ ದೊರೆಯುವ ಹಣವನ್ನು ಆಯಾ ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರದ ಮೂಲಕ  ಮತ್ತು ಸರ್ಕಾರದ ಅನುಮತಿ ಪಡೆದು ಬಳಸಿ, ಭಕ್ತಿರಿಗೆ ಅಗತ್ಯ ಸೌಲಭ್ಯ ಒದಗಿಸಲು ಸೂಚಿಸಲಾಗಿದೆ. ದೇವಸ್ಥಾನದ ಹಣ ದುರುಪಯೋಗ ಆಗದಂತೆ ಎಚ್ಚರ ವಹಿಸಲಾಗಿದ್ದು, ಉನ್ನತ ಮಟ್ಟದ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದೆ ಎಂದ ತಿಳಿಸಿದರು.

ಕ್ರೀಡಾ ಇಲಾಖೆಯ ಜವಾಬ್ದಾರಿಯನ್ನೂ ಹೊಂದಿರುವ ಸಚಿವ ಜಿ. ಪರಮೇಶ್ವರ ಅವರು, ಕ್ರೀಡಾಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಹಾಗೂ ಸರಕಾರಿ ಶಾಲಾ ಕಾಲೇಜುಗಳಲ್ಲಿ ಅಗತ್ಯ ಕ್ರೀಡಾ ಸೌಲಭ್ಯಗಳನ್ನು ನೀಡುವುದರ ಮೂಲಕ ಉತ್ತೇಜನ ನೀಡಲಾಗುವುದು. ಕ್ರೀಡಾ ಪಟುಗಳಿಗೆ ಅವರ ಸಾಧೆಯ ಅನುಸಾರ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಪ್ರತಿಶತ ೨ ರಷ್ಟು ಅವಕಾಶ ಕಲ್ಪಿಸಲಾಗುತ್ತಿದ್ದು, ಈಗಾಗಲೇ ಗೃಹ ಇಲಾಖೆಯಲ್ಲಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಕರ್ನಾಟಕ ಸುದ್ದಿ

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನದ ಹುಂಡಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಹಣಕಾಸಿನ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಯೋಧ್ಯೆಯ ರಾಮಮಂದಿರದ ಹುಂಡಿ ಹಣ ದುರ್ಬಳಕೆ ಘಟನೆಯಿಂದ ಎಚ್ಚೆತ್ತಕೊಳ್ಳಬೇಕು. ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿಗಳ ನಿಗಾ ವಹಿಸಬೇಕು ಸಲಹೆ ನೀಡಲಾಗಿದೆ. 

Admin
ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಕರ್ನಾಟಕ ಸುದ್ದಿ

ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ

ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ - ಡಿಕೆಶಿ

Admin