'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ
ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!
'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಸರ್ಕಾರಿ ಆವರಣಗಳು ಹಾಗೂ ಸಾರ್ವಜನಿಕ ಆಸ್ತಿಗಳನ್ನು ಖಾಸಗಿ ವ್ಯಕ್ತಿಗಳು, ಸಂಸ್ಥೆಗಳು, ಸಂಘ-ಸಂಸ್ಥೆಗಳು, ಸಂಘಟನೆಗಳು ಮತ್ತು ಸೊಸೈಟಿಗಳು ಬಳಸುವುದನ್ನು ನಿಯಂತ್ರಿಸುವುದು ಹಾಗೂ ನಿರ್ವಹಿಸುವುದು ಈ ವಿಧೇಯಕದ ಉದ್ದೇಶವಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇಂದು ಹಂಚಿಕೊಂಡಿದ್ದಾರೆ.
ಸರ್ಕಾರಿ ಜಮೀನುಗಳು, ಕಟ್ಟಡಗಳು, ಆಟದ ಮೈದಾನಗಳು, ಉದ್ಯಾನವನಗಳು, ರಸ್ತೆಗಳು ಸೇರಿದಂತೆ ಇತರೆ ಸಾರ್ವಜನಿಕ ಆಸ್ತಿಗಳ ಸಂರಕ್ಷಣೆ, ಸುರಕ್ಷತೆ ಮತ್ತು ಜವಾಬ್ದಾರಿಯುತ ಬಳಕೆಗೆ ಕಾನೂನು ಚೌಕಟ್ಟು ಒದಗಿಸುವುದು ಇದರ ಉದ್ದೇಶ. ದುರ್ಬಳಕೆಯನ್ನು ತಡೆಯುವುದರ ಜೊತೆಗೆ, ಸಾರ್ವಜನಿಕ ಹಿತಾಸಕ್ತಿಗಾಗಿ ಈ ಆಸ್ತಿಗಳನ್ನು ಸಂರಕ್ಷಿಸುವ ಗುರಿಯನ್ನು ವಿಧೇಯಕ ಹೊಂದಿದೆ.
ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ?
ಇದು ಯಕ್ಷ ಪ್ರಶ್ನೆ!
ಎಂದು ಸಚಿವ ಪ್ರಿಯಾಂಕ ಖರ್ಗೆ ಉದ್ಘಾರದಲ್ಲಿಯೇ ಉತ್ತರ ನೀಡಲು ಪ್ರಯತ್ನಿಸಿದ್ದಾರೆ.
ಈ ಲೇಖನ ಹಂಚಿಕೊಳ್ಳಿ