ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ
📄 ಕರ್ನಾಟಕ ಸುದ್ದಿ
Dr. K N Doddmani · · 59 ವೀಕ್ಷಣೆಗಳು

ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ

ಅಸ್ಮಿತೆ ವರದಿ, ಜು.28: "ಬೆಳಗಾವಿ ಮಹಾ ನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಬೇಕು.ಇಲ್ಲದೇ ಹೋದರೆ ಸರ್ಕಾರ ಮುಂದಿನ ಕಠಿಣ ನಿರ್ಧಾರದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇನೆ" ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕೆಂದು ಆಗ್ರಹಿಸಿ ಕಳೆದ ಮಾರ್ಚ 26 ರಿಂದ ಹೋರಾಟ ನಡೆಸುತ್ತಿರುವ ಸಮಾನ ಮನಸ್ಕ 22 ಕನ್ನಡಪರ ಸಂಘಟನೆಗಳ ಅಧ್ಯಕ್ಷರುಗಳೊಂದಿಗೆ ಇಂದು ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಸುದೀರ್ಘವಾಗಿ ಚರ್ಚೆ ಸಚಿವರು ಕಠಿಣ ಕ್ರಮದ ಸೂಚನೆ ನೀಡಿದ್ದಾರೆ.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ,ಗಡಿವಿವಾದಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ ಎಂಬುದು ರಾಜ್ಯ ಸರಕಾರದ ನಿಲುವಾಗಿದೆ.ಬೆಳಗಾವಿ ಪಾಲಿಕೆಯಲ್ಲಿ ಇಂಥ ಗೊತ್ತುವಳಿ ಅಂಗೀಕರಿಸಲು ಯಾವದೇ ಕಾನೂನು ತೊಡಕಿಲ್ಲ ಎಂದು ಗಡಿ ಹಾಗೂ ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ನಾಗಮೋಹನದಾಸ ಅವರು ಸ್ಪಷ್ಟ ಅಭಿಪ್ರಾಯ ತಿಳಿಸಿದ್ದಾರೆ.ಗೊತ್ತುವಳಿ ಪಾಸು ಮಾಡುವದು ಅನಿವಾರ್ಯ ಹಾಗೂ ಅವಶ್ಯ ಎಂದೂ ಸಹ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಬೆಳಗಾವಿ ಪಾಲಿಕೆಯಲ್ಲಿ ಬಹುಮತ ಹೊಂದಿರುವವರು ತಾವಾಗಲೇ ಕರ್ನಾಟಕ ಪರವಾದ ಗೊತ್ತುವಳಿ ಪಾಸು ಮಾಡಬೇಕಿತ್ತು.ನಾಲ್ಕು ತಿಂಗಳ ಕಾಲ ಹೋರಾಟ ನಡೆಸಿರುವುದು ಮತ್ತು ಈ ಸಂಬಂಧ ನಡೆದಿರುವ ಬೆಳವಣಿಗೆಗಳು ಮೊನ್ನೆಯಷ್ಟೇ ತಮ್ಮ ಗಮನಕ್ಕೆ ಬಂದಿದೆ. ಮುಖ್ಯಮಂತ್ರಿಗಳ ಜೊತೆಗೆ ಈ ಸಂಬಂಧ ಶೀಘ್ರವೇ ಚರ್ಚೆ ನಡೆಸುತ್ತೇನೆ ಎಂದು ಸಚಿವರು ಹೋರಾಟಗಾರರಿಗೆ ಭರವಸೆ ನೀಡಿದ್ದಾರೆ.

ವಿಷಯ ಬೆಳವಣಿಗೆ ಬಗ್ಗೆ ಸಚಿವರ ಗಮನಕ್ಕೆ ತಂದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ,"ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಗೊತ್ತುವಳಿ ಅಂಗೀಕರಿಸಲು ಹೋರಾಟ ನಡೆಸಬೇಕಾಗಿ ಬಂದಿರುವುದೇ ಒಂದು ದೊಡ್ಡ ದುರಂತ.2005 ರಲ್ಲಿ ಬೆಳಗಾವಿ ಪಾಲಿಕೆಯಲ್ಲಿ ಮಹಾರಾಷ್ಟ್ರ ಪರವಾದ ಗೊತ್ತುವಳಿ ಸ್ವೀಕರಿಸಿದ್ದನ್ನು ಮಹಾರಾಷ್ಟ್ರ ಸರಕಾರ ಸುಪ್ರೀಂ ಕೋರ್ಟಿನ ಮುಂದಿರುವ ಗಡಿವಿವಾದ ಪ್ರಕರಣದಲ್ಲಿ ಪೂರಕ ದಾಖಲೆಯನ್ನಾಗಿ ಬಳಸಿದೆ.ಅದಕ್ಕೆ ಎದಿರೇಟು ನೀಡಲು ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಲು ಕನ್ನಡ ಸಂಘಟನೆಗಳು ಹೋರಾಟ ನಡೆಸಿವೆ ರಾಜ್ಯ ಸರಕಾರ ತಾನಾಗಿಯೇ ಮುಂದಾಗಿ ಮಾಡಬೇಕಾದ ಕೆಲಸವನ್ನು ಕನ್ನಡ ಸಂಘಟನೆಗಳು ಮಾಡಿವೆ.ಗೊತ್ತುವಳಿ ಪಾಸು ಮಾಡುವ ಬಗ್ಗೆ ಪಾಲಿಕೆಯ ಮೇಯರ್ ರಾಜ್ಯ ಸರಕಾರದ ಅಭಿಪ್ರಾಯ ಕೇಳಿದರು.ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ತಮ್ಮ ಮೇಲಿನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮಾಡಿದ ಕುತಂತ್ರಗಳಿಂದ ಕನ್ನಡ ಸಂಘಟನೆಗಳು ರೋಸಿ ಹೋಗಿವೆ.ಹಿರಿಯ ಅಧಿಕಾರಿಗಳು ಕರ್ನಾಟಕದಲ್ಲಿ ಕೆಲಸ ಮಾಡುತ್ತಿದ್ದಾರೆಯೇ" ಎಂದು ಸಂಶಯ ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಿತ್ತೂರು ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಮಹಾದೇವ ತಳವಾರ,ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ,ಸರ್ವೋದಯ ಸಂಘದ ಅಧ್ಯಕ್ಷ ಶ್ರೀನಿವಾಸ ತಾಳು ಕರ,ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜಿದ್ ಹಿರೆಕೋಡಿ,ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಶಿವಾರೆಡ್ಡಿ ಹುಚ್ಚರೆಡ್ಡಿ ಮುಂತಾದವರು ಮಾತನಾಡಿ,ಬೆಳಗಾವಿಯ ನಾಮಫಲಕಗಳಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸುವ ಕುರಿತು ಪಾಲಿಕೆಯ ಅಧಿಕಾರಿಗಳು ರಾಜ್ಯ ಸರಕಾರದ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ತಿಳಿಸಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin