ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು
📄 ಕರ್ನಾಟಕ ಸುದ್ದಿ
Dr. K N Doddmani · · 69 ವೀಕ್ಷಣೆಗಳು

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು

ಗೃಹ ಇಲಾಖೆಯ ಹೊಸ ಮಾರ್ಗಸೂಚಿಗಳ ಮೂಲಕ, ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ ಕುರಿತು ಸ್ಪಷ್ಟ ನಿಯಮಾವಳಿ ಜಾರಿಗೆ ತರಲಾಗಿದೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ತನಿಖೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ಮಾಹಿತಿಯನ್ನು ಜವಾಬ್ದಾರಿಯುತವಾಗಿ ಮತ್ತು ಸಮನ್ವಯದೊಂದಿಗೆ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಈ ಸಂಬಂಧ ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ ಎಂದು ರಾಜ್ಯ ಗೃಹ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ತಮ್ಮ‌ ಸಾಮಾಜಿಕ ಜಾಲತಾಣದಲ್ಲಿ ಮಾರ್ಗಸೂಚಿಗಳ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಾದ್ಯಂತ ಪೊಲೀಸ್ ಠಾಣೆಗಳು, ಜಿಲ್ಲಾ ಪೊಲೀಸ್ ಕಚೇರಿಗಳು, ನಗರ ಪೊಲೀಸ್ ಆಯುಕ್ತಾಲಯಗಳು ಹಾಗೂ ವಿಶೇಷ ಘಟಕಗಳು ಮಾಧ್ಯಮಗಳಿಗೆ ಮಾಹಿತಿ ಹಂಚುವ ಸಂದರ್ಭದಲ್ಲಿ ಏಕೀಕೃತ ವಿಧಾನವನ್ನು ಅನುಸರಿಸಲಿದ್ದು, ಇದರಿಂದ ತಪ್ಪು ಮಾಹಿತಿ ಹರಡುವುದನ್ನು ತಡೆಯುವ ಜೊತೆಗೆ ತನಿಖೆಯ ಗೌಪ್ಯತೆ ಕಾಪಾಡಲು ಸಹಾಯವಾಗಲಿದೆ ಎಂದು ತಿಳಿಸಿದ್ದಾರೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಠಾಣಾ ಮಟ್ಟದಲ್ಲಿ ಪೊಲೀಸ್ ಉಪನಿರೀಕ್ಷಕರು, ವೃತ್ತ ನಿರೀಕ್ಷಕರು ಹಾಗೂ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಘಟನೆಗಳಿಗೆ ಸಂಬಂಧಿಸಿದ ಪ್ರಾಥಮಿಕ ಮಾಹಿತಿಯನ್ನು ಮಾತ್ರ ಹಂಚಿಕೊಳ್ಳಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ನಗರ ಪ್ರದೇಶಗಳಲ್ಲಿ ಪೊಲೀಸ್ ಆಯುಕ್ತರು ಹಾಗೂ ವಿಶೇಷ ಘಟಕಗಳ ಮುಖ್ಯಸ್ಥರು ಅಧಿಕೃತ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಲಿದ್ದಾರೆ ಅಪರಾಧ ಪ್ರಕರಣಗಳ ತನಿಖೆ, ಗುಪ್ತಚರ ಮಾಹಿತಿ, ಸಂವೇದನಾಶೀಲ ಪ್ರಕರಣಗಳು, ಸೈಬರ್ ಅಪರಾಧಗಳು, ಸಂಘಟಿತ ಅಪರಾಧ ಚಟುವಟಿಕೆಗಳು ಹಾಗೂ ಕಾನೂನು ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಅನುಮತಿ ಇಲ್ಲದೆ ಬಹಿರಂಗಪಡಿಸದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ.

ಪ್ರಕರಣದ ತನಿಖೆಗೆ ಧಕ್ಕೆಯಾಗುವ ರೀತಿಯ ಮಾಹಿತಿ, ಸಾಕ್ಷ್ಯಾಧಾರಗಳು, ಆರೋಪಿಗಳ ಹೇಳಿಕೆಗಳು, ಗುಪ್ತಚರ ಮಾಹಿತಿ, ಪ್ರಥಮ ವರ್ತಮಾನ ವರದಿ ಅಥವಾ ಕೇಸ್ ಡೈರಿಗಳಂತಹ ದಾಖಲೆಗಳನ್ನು ಅನುಮತಿಯಿಲ್ಲದೆ ಹಂಚಿಕೊಳ್ಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇದೇ ವೇಳೆ, ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮ ವೇದಿಕೆಗಳಲ್ಲಿ ಪೊಲೀಸ್ ಸಿಬ್ಬಂದಿ ಜವಾಬ್ದಾರಿಯುತ ನಡೆ ತೋರಬೇಕು ಎಂಬುದಕ್ಕೂ ಮಾರ್ಗಸೂಚಿಯಲ್ಲಿ ಒತ್ತು ನೀಡಲಾಗಿದೆ. ಪೊಲೀಸ್ ಇಲಾಖೆಯ ಅಧಿಕೃತ ನಿಲುವು ಪ್ರಕಟಿಸುವ ಅಧಿಕಾರ ನಿಗದಿತ ಅಧಿಕಾರಿಗಳಿಗೆ ಮಾತ್ರ ಇರಲಿದೆ.

ಈ ಕ್ರಮದಿಂದ ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ, ಜವಾಬ್ದಾರಿ ಮತ್ತು ವೃತ್ತಿಪರತೆ ತರಲು ಸಾಧ್ಯವಾಗಲಿದ್ದು, ಸಾರ್ವಜನಿಕರಲ್ಲಿ ವಿಶ್ವಾಸ ಮತ್ತಷ್ಟು ಬಲವಾಗಲಿದೆ. ಸರ್ಕಾರದ ಸ್ಪಷ್ಟ ಉದ್ದೇಶ ಜನರಿಗೆ ಸರಿಯಾದ ಮಾಹಿತಿ ತಲುಪಿಸುವುದು ಹಾಗೂ ತನಿಖೆಯ ಗೌಪ್ಯತೆ ಮತ್ತು ನ್ಯಾಯಾಂಗ ಪ್ರಕ್ರಿಯೆಗಳ ಶುದ್ಧತೆಯನ್ನು ಕಾಪಾಡುವುದಾಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin