ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ
📄 ಕರ್ನಾಟಕ ಸುದ್ದಿ
Dr. K N Doddmani · · 85 ವೀಕ್ಷಣೆಗಳು

ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ

ಬೆಳಗಾವಿ ಮಹಾನಗರ ಪಾಲಿಕೆ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" "ಗಡಿ ವಿವಾದಕ್ಕೆ ಮಹಾಜನ ವರದಿಯೇ ಅಂತಿಮ" ಎಂದು ಗೊತ್ತುವಳಿ ಅಂಗೀಕರಿಸಲು ಯಾವದೇ ತೊಡಕು ಇಲ್ಲ.

ಮಹಾದಾಯಿ, ಕೃಷ್ಣೆ, ಕಾವೇರಿ ಜಲ ವಿವಾದ ನಿವಾರಣೆಗೆ ರಾಜ್ಯ ಸರ್ಕಾರದ ಹೆಚ್ಚಿನ ಮುತವರ್ಜಿ ಅಗತ್ಯ : ನ್ಯಾಯವಾದಿ ಮೋಹನ ಕಾತರಕಿ

--

ರಾಜ್ಯದ ಮಹತ್ವಾಕಾಂಕ್ಷೆಯ ಮಹಾದಾಯಿ, ಕೃಷ್ಣೆ ಹಾಗೂ ಕಾವೇರಿ ನದಿಗಳ  ನೀರಾವರಿ ಯೋಜನೆಗಳು ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳ್ಳದೇ ಇರುವುದಕ್ಕೆ ಅಂತರಾಜ್ಯದ ವಿವಾದಗಳ ಬಗೆ ಹರಿಸುವಲ್ಲಿ ರಾಜ್ಯ ಸರ್ಕಾರದ ವಿಶೇಷ ಮುತವರ್ಜಿಯ ಕೊರತೆ ಎದ್ದು ಕಾಣುತ್ತಿದೆ ಎಂದು  ಎಂದು ಸರ್ವೋಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಮೋಹನ ಕಾತರಕಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಹಾಗೂ ಇತರ ಸಮಾನ ಮನಸ್ಕ ಕನ್ನಡ ಸಂಘಟನೆಗಳು ಆಯೋಜಿಸಿದ್ದ ಸಂವಾದದಲ್ಲಿ  ಮಾತನಾಡಿದ ಅವರು, ಮಹಾದಾಯಿ ನದಿ ನೀತಿನ ಹಂಚಿಕೆ ಪರಿಸರಕ್ಕೆಸಂಬಂಧಪಟ್ಡ ಸಣ್ಣದಾದ ವಿವಾದದ ಕಾರಣ ನೆನೆಗುದಿಗೆ ಬಿದ್ದಿದೆ. ಇಂತಹ ಸಣ್ಣ ಪುಟ್ಟ ವಿವಾದಗಳನ್ನು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಹೆಚ್ಚಿನ ಒತ್ತಡ ಹೇರಿ ಬಗೆ ಹರಿಸಿಕೊಳ್ಳಲು ಮುಂದಾಗಬೇಕು. ಪ್ರಸ್ತುತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಾಕಷ್ಟು ಪ್ರಮಾಣದಲ್ಲಿ ಹಣ  ವಿನಿಯೋಗಕ್ಕೆ ಮುಂದಾಗಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಹೆಚ್ಚು ಕ್ರಿಯಾಶೀಲಗೊಳ್ಳಲು ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಒತ್ತಡ ಹೇರುವ ಅಗತ್ಯವಿದೆ ಎಂದು ತಿಳಿಸಿದರು.

ಬೆಳಗಾವಿ ನಮ್ಮದೆನ್ನಲು ಯಾವ ಅಡಚಣಿ ಇಲ್ಲ:

ಬೆಳಗಾವಿ ಮಹಾನಗರ ಪಾಲಿಕೆ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" "ಗಡಿ ವಿವಾದಕ್ಕೆ ಮಹಾಜನ ವರದಿಯೇ ಅಂತಿಮ" ಎಂದು ಗೊತ್ತುವಳಿ ಅಂಗೀಕರಿಸಲು ಯಾವದೇ ತೊಡಕು ಇಲ್ಲ. ನಿರ್ಣಯ ಅಂಗೀಕರಿಸಿದರೆ ಸಬ್ ಜ್ಯೂಡಿಸ್ ಆಗುವದಿಲ್ಲ. ಸರ್ವೋಚ್ಚ ನ್ಯಾಯಾಲಯದಲ್ಲಿರುವ ಗಡಿವಿವಾದ ಪ್ರಕರಣದ ಮೆರಿಟ್ ಬಗ್ಗೆ ಮಾತನಾಡುವ ಪ್ರಶ್ನೆಯೇ ಇಲ್ಲ.ಬೆಳಗಾವಿ ನಮ್ಮದು ಎಂಬುದಕ್ಕೆ ಯಾವ ಅಡಚಣೆಯೂ ಇಲ್ಲ ಎಂದು ಮೋಹನ ಕಾತರಕಿ ತಿಳಿಸಿದ್ದಾರೆ.

ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಸೇರಿದಂತೆ ಕನ್ನಡ ಹೋರಾಟಗಾರರಾದ ವಾಜಿದ ಹಿರೆಕೋಡಿ, ಬಲರಾಮ ಮಾಸೇನಟ್ಟಿ,ಶ್ರೀನಿವಾಸ ತಾಳುಕರ,ಬಾಳಪ್ಪ ಗುಡಗೇನಟ್ಟಿ, ಸಂಕುಪ್ಪಿ,ಶಂಕರ ಬಾಗೇವಾಡಿ,ಇರ್ಫಾನ್,ಮಲ್ಲಪ್ಪ ಅಕ್ಷರದ,ಶಿವಪ್ಪ ಶಮರಂತ,ಸಾಗರ ಬೋರಗಲ್ಲ, ಎಂ.ಜಿ.ಮಕಾನದಾರ ಮುಂತಾದವರು ಭಾಗವಹಿಸಿದ್ದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin