ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 
📄 ಕರ್ನಾಟಕ ಸುದ್ದಿ
Dr. K N Doddmani · · 53 ವೀಕ್ಷಣೆಗಳು

ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನದ ಹುಂಡಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಹಣಕಾಸಿನ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಯೋಧ್ಯೆಯ ರಾಮಮಂದಿರದ ಹುಂಡಿ ಹಣ ದುರ್ಬಳಕೆ ಘಟನೆಯಿಂದ ಎಚ್ಚೆತ್ತಕೊಳ್ಳಬೇಕು. ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿಗಳ ನಿಗಾ ವಹಿಸಬೇಕು ಸಲಹೆ ನೀಡಲಾಗಿದೆ. 

ಅಸ್ಮಿತೆ ವರದಿ, ಜು.09: ಕಿತ್ತೂರು ‌ಕರ್ನಾಟಕ‌  ಕೆಲವು ಪ್ರದೇಶದಲ್ಲಿ ಮಳೆಯಾಗಿದ್ದರು ನಿಗದಿ ಪ್ರಮಾಣದಲ್ಲಿ ಆಗದೇ ಇರುವುದರಿಂದ ನೀರಿನ‌ ಸಮಸ್ಯೆ ಬಹಳ‌ ಇದೆ. ಆದ್ದರಿಂದ ಗ್ರಾಮೀಣ ಪ್ರದೆಶದ ಎಲ್ಲ ಶಾಸಕರಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧದಲ್ಲಿ ಇಂದು ವಿಭಾಗ ಮಟ್ಟದ ಅಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಸರಕಾರದ ಮಾರ್ಗಸೂಚಿ ಪ್ರಕಾರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನ ಬಳಕೆ ಮಾಡಲು ಸಮಿತಿ ಮೂಲಕ ಪ್ರಸ್ತಾವಣೆ ಸಲ್ಲಿಸಲು ಸೂಚಿಸಲಾಗಿದೆ ಎಂದರು.

ಕೃಷ್ಣಾ, ಕಾವೇರಿ ಹಾಗೂ ಗೋದಾವರಿ ನದಿ ಜೋಡಣೆಗೆ ಒಮ್ಮತದಿಂದ ಒಪ್ಪಿಗೆ ಸೂಚಿಸಲಾಗಿದೆ.‌ಇದೊಂದು ಐತಿಹಾಸಿಕ ನಿರ್ಧಾರ. ರಾಜ್ಯದ ಎಲ್ಲ ಜಲಾಶಯಗಳ‌ ಗೇಟ್ ಗಳ ಪರಿಶೀಲನೆ ನಡೆಯುತ್ತಿದ್ದು ತೀರ‌ಹಳೆಯದಾದ ಗೇಟ್ ಗಳನ್ನು ತೆಗೆದು‌ಹೊಸ ಗೇಟ್ ಗಳನ್ನು ಅಳವಡಿಸಲಾಗುವುದು. ಅಂತರರಾಜ್ಯ ನೀರಿ‌ ಸಮಸ್ಯೆಯ‌ ನಿವಾರಣೆ ಹಾಗೂ ವ್ಯರ್ಥವಾಗಿ ಹರಿಯುತ್ತಿದ್ದ‌ ನೀರಿನ ಸದ್ಭಳಕೆಗೆ ನೆರೆಯ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿ ಒಮ್ಮತ ನಿರ್ಧಾರ ತೆಗೆದುಕೊಂಡು ಕೇಂದ್ರದ ಗಮನಕ್ಕೆ ತಂದು ತಾಂತ್ರಿಕ ಸಮಿತಿ ರಚಿಸಲು ವಿನಂತಿಸಿಕೊಳ್ಳಲಾಗಿದೆ.

ಕುಡಿಯುವ ನೀರು ಪೂರೈಕೆ‌ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ಅರಣ್ಯ ಇಲಾಖೆಯವರು  ತೊಂದರೆ ಕೊಡದಂತೆ ಮತ್ತು ಅರಣ್ಯ ವಲಯದಲ್ಲಿ ವಾಸವಿರುವ ನಿವಾಸಿಗಳ ಬಗರ್ ಹುಕಂ ಸಾಗುವಳಿಗೆ ಸಂಬಂಧಿಸಿದಂತೆ ಅರ್ಜಿ ತಿರಸ್ಕಾರ ಅಥವಾ ಒಕ್ಕಲೆಬ್ಬಿಸಬಾರದು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನದ ಹುಂಡಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಹಣಕಾಸಿನ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಅಯೋಧ್ಯೆಯ ರಾಮಮಂದಿರದ ಹುಂಡಿ ಹಣ ದುರ್ಬಳಕೆ ಘಟನೆಯಿಂದ ಎಚ್ಚೆತ್ತಕೊಳ್ಳಬೇಕು. ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿಗಳ ನಿಗಾ ವಹಿಸಬೇಕು ಸಲಹೆ ನೀಡಲಾಗಿದೆ.

ಮೋಡ ಬಿತ್ತನೆ ಅಧಿಕಾರಿಗಳ‌ ಹಾಗೂ ಝನಪ್ರತಿನಿಧಿಗಳೊಡನೆ  ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಅರ್ಹ ಮತದಾರನ ಹಕ್ಕು ರಕ್ಷಿಸಲು ಎಲ್ಲ ಪಿಡಿಓ ಹಾಗೂ ಬಿ.ಎಲ್.ಓ. ಗಳು  ಜಾಗೃತಿ ಮೂಡಿಸಿ ಮತದಾರರ ಹಕ್ಕು ಪಡೆದುಕೊಳ್ಳಲು ಸಹಕರಿಸಲು ಸೂಚಿಸಲಾಗಿದೆ. ಗ್ಯಾರಂಟಿ ಯೋಜನೆ ದುರ್ಬಳಕೆಯ ಲೋಪದೋಷಗಳನ್ನು ಸರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin