ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ
📄 ಕರ್ನಾಟಕ ಸುದ್ದಿ
Dr. K N Doddmani · · 147 ವೀಕ್ಷಣೆಗಳು

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ

"ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು”

ಅಸ್ಮಿತೆ ವರದಿ, ಜುಲೈ, 23: “ನಗರ ಪ್ರದೇಶಗಳಲ್ಲಿ 50 ಸಾವಿರಕ್ಕಿಂತ ಹೆಚ್ಚು ಶುಲ್ಕ ಪಡೆಯುತ್ತಿರುವ ಶಾಲೆಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ಪಡೆಯಬೇಕು. ಒಂದು ವೇಳೆ ಈ ಶಾಲೆಗಳು ದತ್ತು ಪಡೆಯದೇ ಇದ್ದರೆ ಈ ಶಾಲೆಗಳ ಶುಲ್ಕಗಳಿಗೆ ಮಿತಿ ಹಾಕಲಾಗುವುದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಡಕ್ಕಾದ ಸಂದೇಶ ರವಾನಿಸಿದ್ದಾರೆ.

ಬೆಂಗಳೂರು ನಗರದ ಕೆ.ಜಿ ರಸ್ತೆಯಲ್ಲಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ)ಯ ಎಂ.ವಿ ಸಭಾಂಗಣದಲ್ಲಿ ಎಫ್‌ಕೆಸಿಸಿಐ ಜಾಗತಿಕ ಸಿಎಸ್ಆರ್ ಮತ್ತು ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿಯಷ್ಟು ಸಿಎಸ್ಆರ್ ನಿಧಿ ಇದ್ದು, ಇದರ ಪ್ರತಿಯೊಂದು ಪೈಸೆ ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗವಾಗಬೇಕು” ಎಂದು ಡಿ ಕೆ ಶಿವಕುಮಾರ್ ಸೂಚಿಸಿದರು.

“ದತ್ತು ಪಡೆದ ಈ ಶಾಲೆಗಳು ಸರ್ಕಾರಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಹಣ ಹಾಕುವುದು ಬೇಡ, ಅವರು ಕೇವಲ ಬೋಧಕರನ್ನು ನಿಯೋಜಿಸಿದರೆ ಸಾಕು. ನಮ್ಮ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ. ಸರ್ಕಾರಿ ಶಾಲಾ ಶಿಕ್ಷಕರಿಗೆ ನಾವು ಖಾಸಗಿ ಶಾಲೆಗಳಿಗಿಂತ ಉತ್ತಮ ವೇತನ ನೀಡುತ್ತಿದ್ದೇವೆ. ನೀವೆಲ್ಲರೂ ಇದರ ಭಾಗವಾಗಬೇಕು. ನಾನು ಕೂಡ ಮೂರು ಶಾಲೆ ನಡೆಸುತ್ತಿದ್ದೇನೆ. ನಮ್ಮ ಶಾಲೆಗಳು ಕೂಡ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ದತ್ತು ಪಡೆಯಬೇಕು ಎಂದು ನನ್ನ ಮಗಳಿಗೆ ತಿಳಿಸಿದ್ದೇನೆ. ಆಕೆ ಮೂರು ಶಾಲೆ ದತ್ತು ಪಡೆದಿದ್ದಾರೆ” ಎಂದು ತಿಳಿಸಿದರು.

“ನಾವು ಅಧಿಕಾರಕ್ಕೆ ಬಂದ ಬಳಿಕ ನಮ್ಮ ಸಚಿವರ ಜೊತೆ ಚರ್ಚೆ ಮಾಡಿ, ಸಿಎಸ್ಆರ್ ನಿಧಿಯನ್ನು ಶಿಕ್ಷಣ ಕ್ಷೇತ್ರಕ್ಕೆ ಬಳಸಲು ತೀರ್ಮಾನಿಸಿದ್ದೇವೆ. ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು” ಎಂದು ಹೇಳಿದರು.

“ಗ್ರಾಮೀಣ ಭಾಗದ ಮಕ್ಕಳಿಗೆ ನಗರ ಪ್ರದೇಶದಂತೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಹೀಗಾಗಿ ನಾವು ನೀತಿ ರೂಪಿಸುತ್ತಿದ್ದು, ಎಲ್ಲರೂ ಸಿಎಸ್ಆರ್ ನಿಧಿಯನ್ನು ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗಿಸಬೇಕು. ಸಿಎಸ್ಆರ್ ನಿಧಿಯಲ್ಲಿ ಶಾಲೆಗಳನ್ನು ಗ್ರಾಮೀಣ ಭಾಗದಲ್ಲಿ ನಿರ್ಮಾಣ ಮಾಡಬೇಕು. ನಮ್ಮ ಸರ್ಕಾರ ರಾಜ್ಯದಲ್ಲಿ 2 ಸಾವಿರ ಜಾಗಗಳನ್ನು ಗುರುತಿಸಿದ್ದು, ಪ್ರತಿ ಕಾರ್ಪೊರೇಟ್ ಸಂಸ್ಥೆ ಈ ಜಾಗಗಳಲ್ಲಿ ಅತ್ಯುತ್ತಮ ಮೂಲಸೌಕರ್ಯವಿರುವ ಶಾಲೆಗಳನ್ನು ನಿರ್ಮಾಣ ಮಾಡಬೇಕು” ಎಂದು ಹೇಳಿದರು.

“ನೀವು ನಮಗೆ ಹಣ ನೀಡಬೇಡಿ, ನೀವೇ ಹಣ ಹಾಕಿ ಶಾಲೆ ನಿರ್ಮಿಸಿ. ಶಾಲೆಗೆ ನಿಮ್ಮ ಸಂಸ್ಥೆಯ ಹೆಸರನ್ನು ಸೇರಿಸಿ. ಟೊಯೋಟಾ ಬೆಂಗಳೂರಿನಲ್ಲಿ 7-8 ಶಾಲೆಗಳನ್ನು ನಿರ್ಮಿಸುತ್ತಿವೆ. ಟೋಯೋಟಾದವರು ಪ್ರತಿ ಶಾಲೆಗೆ 10-15 ಕೋಟಿ ಹಣ ವೆಚ್ಚ ಮಾಡಿ ನಿರ್ಮಿಸುತ್ತಿದ್ದಾರೆ ಉಪ ಆಯುಕ್ತರು ನಿಮಗೆ ಜಾಗ ನೀಡುತ್ತಾರೆ. ಆ ಜಾಗದಲ್ಲಿ ನೀವು ಶಾಲೆ ನಿರ್ಮಿಸಬಹುದು. ನಿಮಗೆ ಒಬ್ಬರಿಂದಲೇ ಸಂಪೂರ್ಣ ಶಾಲೆಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗದಿದ್ದರೆ, ಶಾಲೆಯ ಕೆಲವೊಂದು ಭಾಗವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಲಾಗುವುದು. ಇದಕ್ಕಾಗಿಯೇ ಒಂದು ವೇದಿಕೆ ರೂಪಿಸಲಾಗುವುದು” ಎಂದರು.

“ಸಿಎಸ್ಆರ್ ನಿಧಿಯನ್ನು ಮೊದಲು ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗಿಸಿ, ನಂತರ ಆರೋಗ್ಯ ಕ್ಷೇತ್ರದತ್ತ ಗಮನಹರಿಸಬಹುದು. ನಾವು ಈ ವಿಚಾರವಾಗಿ ನೀತಿ ರೂಪಿಸಿ, ಎಲ್ಲಾ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ಮಾಡಲಾಗುವುದು. ಸಧ್ಯದಲ್ಲೇ ನಾನು ವಿವಿಧ ಕ್ಷೇತ್ರಗಳ ಉದ್ಯಮಗಳ ಜೊತೆ ಸಭೆ ಮಾಡಲಿದ್ದೇನೆ. ಇದರಿಂದ ಶಿಕ್ಷಣಕ್ಕೆ ನಗರಗಳತ್ತ ವಲಸೆ ಹೋಗುವುದನ್ನು ತಪ್ಪಿಸಬಹುದು. ನಮ್ಮ ಹಳ್ಳಿಯ ಮಕ್ಕಳು ಕೇವಲ ಬೆಂಗಳೂರು ಅಥವಾ ಇತರೆ ಭಾಗದ ಮಕ್ಕಳ ಜೊತೆ ಸ್ಪರ್ಧೆ ಮಾಡುತ್ತಿಲ್ಲ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ” ಎಂದು ಹೇಳಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin