ಸಾಂವಿಧಾನಿಕ ಚೌಕಟ್ಟು ಮೀರಿದವರ ಮೇಲೆ ಮುಲಾಜಿಲ್ಲದೆ ಕ್ರಮಕ್ಕೆ ಪ್ರಿಯಾಂಕ ಖರ್ಗೆ ಸೂಚನೆ
ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಡಿಜಿ ಮತ್ತು ಐಜಿಪಿ ಡಾ. ಎಂ.ಎ ಸಲೀಂ ಅವರೊಂದಿಗೆ ಐಪಿಎಸ್ ಅಧಿಕಾರಿಗಳೊಂದಿಗೆ ಗೃಹ ಇಲಾಖೆಯ ಕುರಿತು ನಡೆಸಲಾದ ಸಭೆಯಲ್ಲಿ ಸೂಚನೆ
ಸಾಂವಿಧಾನಿಕ ಚೌಕಟ್ಟು ಮೀರಿದವರ ಮೇಲೆ ಮುಲಾಜಿಲ್ಲದೆ ಕ್ರಮಕ್ಕೆ ಪ್ರಿಯಾಂಕ ಖರ್ಗೆ ಸೂಚನೆ
--
ಬೆಂಗಳೂರು: ಸಾಂವಿಧಾನಿಕ ಚೌಕಟ್ಟನ್ನು ಮೀರುವ ಯಾವುದೇ ವ್ಯಕ್ತಿ ಮತ್ತು ಯಾವುದೇ ಪ್ರಕರಣಗಳ ವಿರುದ್ಧ ರಾಜಿ ಇಲ್ಲದೆ ಕ್ರಮ ಜರುಗಿಸಬೇಕು, ಸರ್ಕಾರಕ್ಕೆ ಮುಜುಗರವಾಗುವಂತಹ ನಡವಳಿಕೆಗಳನ್ನು ಸಹಿಸುವುದಿಲ್ಲ ಎಂದು ಗೃಹಖಾತೆಯ ನೂತನ ಸಚಿವ ಪ್ರಿಯಾಂಕ ಖರ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಚಿವರು ಖಾತೆ ಜವಾಬ್ದಾರಿ ವಹಿಸಿಕೊಂಡ ನಂತರ ಇಂದು ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಡಿಜಿ ಮತ್ತು ಐಜಿಪಿ ಡಾ. ಎಂ.ಎ ಸಲೀಂ ಅವರೊಂದಿಗೆ ಐಪಿಎಸ್ ಅಧಿಕಾರಿಗಳೊಂದಿಗೆ ಗೃಹ ಇಲಾಖೆಯ ಕುರಿತು ನಡೆಸಲಾದ ಮಾಹಿತಿ ವಿನಿಮಯದ ಔಪಚಾರಿಕ ಸಭೆಯಲ್ಲಿ ವಿಷಯ ತಿಳಿಸಿದ್ದಾರೆ.
ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕರ ವ್ಯಾಪ್ತಿಯಲ್ಲಿ ಬರುವ 6 ಕಮೀಷನರೇಟ್‌ಗಳ ಸ್ಥಿತಿಗತಿಗಳ ಕುರಿತು ಚರ್ಚಿಸಿ, ರಾಜ್ಯದ ಅಪರಾಧ ಪ್ರಕರಣಗಳು, ಸಿಬ್ಬಂದಿ ನೇಮಕಾತಿ, ಕಾನೂನು ಸುವ್ಯವಸ್ಥೆ, ಮಾದಕವಸ್ತುಗಳ ನಿಯಂತ್ರಣ ಮುಂತಾದ ವಿಷಯಗಳ ಕುರಿತಂತೆ ವಿಸ್ತೃತ ಚರ್ಚೆ ನಡೆಸಲಾಯಿತು.

ಕಮೀಷನರೇಟ್ ವ್ಯಾಪ್ತಿಯಲ್ಲಿನ 16 ಯೂನಿಟ್‌ಗಳ ಸ್ಥಿತಿಗತಿಗಳ ಕುರಿತು ಪ್ರತಿ ದಿನ 3 ಯೂನಿಟ್‌ಗಳ ವಸ್ತುಸ್ಥಿತಿ ಪರಿಶೀಲನೆ ಮಾಡಿ ವರದಿ ನೀಡಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ನಿರ್ದೇಶನ ನೀಡಿದರು.
**
ಈ ಲೇಖನ ಹಂಚಿಕೊಳ್ಳಿ