ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್
📄 ಕರ್ನಾಟಕ ಸುದ್ದಿ
Dr. K N Doddmani · · 49 ವೀಕ್ಷಣೆಗಳು

ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್

ಸರಕಾರವನ್ಮು ಜನರು ಹುಡುಕಬಾರದು. ಜನರ ಬಳಿ ಸರಕಾರ ಇರಬೇಕು ಎಂಬುದು ನನ್ನ ಮೊದಲ ಆದ್ಯತೆ. ಜನರನ್ನು ಕಚೇರಿಗೆ ಅಲೆಸುವುದು ನಿಲ್ಲಬೇಕು. ಅಧಿಕಾರಿಗಳು ಘನತೆಯಿಂದ ಇರಬೇಕು

ಬೆಳಗಾವಿ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ

**

ಅಸ್ಮಿತೆ ವರದಿ, ಜು.09: ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ ಆರಂಭಿಸಲಾಗಿದ್ದು, ಈ ಇಲಾಖೆಗೆ ಒಬ್ಬ ಪ್ರತ್ಯೇಕ ಮಂತ್ರಿಯೊಬ್ಬರನ್ನು ನಿಯೋಜಿಸಲಾಗುವುದು ಎಂದು ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಜನರು ಸರಕಾರವನ್ನು ಹುಡುಕಬಾರದು; ಜನರ ಬಳಿಗೆ ಸರಕಾರ ಇರಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮ‌ಲೆಕ್ಕಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.

ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ, ತಾಲ್ಲೂಕುಮಟ್ಟದ ಪ್ರತಿ ಅಧಿಕಾರಿಯು ಕೇಂದ್ರಸ್ಥಾನದಲ್ಲಿರುವ ಬಗ್ಗೆ ಡಿಸಿ, ಸಿಇಓಗಳು ಖಚಿತಪಡಿಸಿಕೊಳ್ಳಬೇಕು. ಚಲನವಲನ ವಹಿ ಮೇಲೆಯೂ ನಿರಂತರ ನಿಗಾ ವಹಿಸಬೇಕು.

ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ಮೊದಲ ಹಾಗೂ ಮೂರನೇ ಶನಿವಾರ ತಿಂಗಳಲ್ಲಿ ಎರಡು ದಿನ ಆಯ್ದ ತಾಲ್ಲೂಕುಗಳಲ್ಲಿ ಪ್ರಜಾಸೇವಾ ಇಲಾಖೆಯಿಂದ ಜನಸಂಪರ್ಕ ಸಭೆಗಳನ್ನು ನಡೆಸಿ ಜನರ‌ ಸಮಸ್ಯೆ ಬಗೆಹರಿಸಬೇಕು ಎಂದು ನಿರ್ದೇಶನ ನೀಡಿದರು.

ಜನಸಂಪರ್ಕ ಸಭೆಯಲ್ಲಿ ಅರ್ಜಿಗಳ ಸ್ವೀಕಾರ, ವಿಲೇವಾರಿ ಸೇರಿದಂತೆ ಪ್ರತಿಯೊಂದರ ನಿಗದಿತ ವಿನ್ಯಾಸವನ್ನು ನೀಡಲಾಗುವುದು. ಕಾನೂನು‌ ಚೌಕಟ್ಟಿನೊಳಗೆ ಜನರ ಸಮಸ್ಯೆ ಬಗೆಹರಿಸಬೇಕು.ಜನರು ಮಕ್ಕಳ ವಿದ್ಯಾಭ್ಯಾಸ ಹಾಗೂ ಉದ್ಯೋಗ ಅರಸಿ ಜನರು ಪಟ್ಟಣಗಳಿಗೆ ಬರುತ್ತಾರೆ. ಇದನ್ನು ತಡೆಯಲು ಸಿ.ಎಸ್.ಆರ್. ನೀತಿಯಡಿ 8000 ಕೋಟಿ ರೂಪಾಯಿಗಳನ್ನು ಮೂರು ಪಂಚಾಯಿತಿ ಸೇರಿಸಿ 10-15 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಸರಕಾರಿ ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಶಿವಕುಮಾರ್ ಹೇಳಿದರು.

ಈ ರೀತಿ‌ ಕನಿಷ್ಠ 2000 ಶಾಲೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಇದಲ್ಲದೇ ಆಯಾ ಜಿಲ್ಲೆಯ ದೊಡ್ಡ ಶಿಕ್ಷಣ ಸಂಸ್ಥೆಗಳು ಮೂರು ಶಾಲೆಗಳನ್ನು ದತ್ತು ಪಡೆದುಕೊಳ್ಳುವಂತೆ ಕ್ರಮ‌ ವಹಿಸಲಾಗುವುದು.

ಎಲ್ಲರಿಗೂ ಗುಣಮಟ್ಟದ ಪ್ರಾಥಮಿಕ ಶಿಕ್ಷಣ ಒದಗಿಸಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.

ಪ್ರತಿಯೊಬ್ಬ ಅರ್ಹ ವ್ಯಕ್ತಿಗೆ ಮತದಾನ ಹಕ್ಕು ನೀಡಬೇಕು ಎಂಬುದು ನಮ್ಮ ಉದ್ಧೇಶವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin