ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ
🎓 ಶಿಕ್ಷಣ
Dr. K N Doddmani · · 114 ವೀಕ್ಷಣೆಗಳು

ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ

ಸರ್ಕಾರಿ ಶಾಲೆಯ ಮಕ್ಕಳಿಗೆ ಎಲ್.ಕೆ.ಜಿ.ಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಿ.ಸಿ.ಎಸ್.ಆರ್ ನಿಧಿಯ ಸಮರ್ಪಕ ಬಳಕೆಗಾಗಿ ಜಿಲ್ಲಾ ಮಟ್ಟದಲ್ಲಿ ಸಿ.ಸಿ.ಎಸ್.ಆರ್ ಕೋಶವನ್ನು ರಚಿಸಲಾಗಿದೆ.

ಅಸ್ಮಿತೆ ವರದಿ, ಜು.೨೩: ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  (ಕೆಪಿಎಸ್) ಅಭಿವೃದ್ಧಿ ಪಡಿಸಲು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿ.ಎಸ್.ಆರ್) ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮುಂದಾಗಿರುವ ಸರ್ಕಾರ ಜಿಲ್ಲೆಯ ಬೆಳಗಾವಿ ಶೈಕ್ಷಣಿಕ ವಿಭಾಗದಲ್ಲಿ ೯೧ ಸರ್ಕಾರಿ ಶಾಲೆಗಳು ಹಾಗೂ ಚಿಕ್ಕೋಡಿಶೈಕ್ಷಣಿಕಕ ವಿಭಾಗದಲ್ಲಿ ೮೪ ಸರ್ಕಾರಿ ಶಾಲೆಗಳು ಸೇರಿ ಒಟ್ಟು ೧೭೫ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲು ಸರ್ಕಾರ ಅನುಮೋದನೆ ನೀಡಿದೆ.

ಈ ಶಾಲೆಗಳ ಅಭಿವೃದ್ಧಿಗೆ ಬೆಳಗಾವಿ ವಿಭಾಗದಲ್ಲಿ ೨೪ ಉದ್ಯಮ ಸಂಸ್ಥೆಗಳು ಹಾಗೂ ಚಿಕ್ಕೋಡಿ ವಿಭಾಗದಲ್ಲಿ ೨೫ ಉದ್ಯಮ ಸಂಸ್ಥೆಗಳನ್ನು ಸಿ.ಎಸ್.ಆರ್ ನಿಧಿಯ ಬಳಕೆಗೆ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಇಂದು  ಜರುಗಿದ ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿ.ಸಿ.ಎಸ್.ಆರ್) ಅನುಷ್ಠಾನ ಜಿಲ್ಲಾ ಕೋಶದ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಯ ಮಕ್ಕಳಿಗೆ ಎಲ್.ಕೆ.ಜಿ.ಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಿ.ಸಿ.ಎಸ್.ಆರ್ ನಿಧಿಯ ಸಮರ್ಪಕ ಬಳಕೆಗಾಗಿ ಜಿಲ್ಲಾ ಮಟ್ಟದಲ್ಲಿ ಸಿ.ಸಿ.ಎಸ್.ಆರ್ ಕೋಶವನ್ನು ರಚಿಸಲಾಗಿದೆ. ಸಿ.ಎಸ್.ಆರ್ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು  ಹಾಗೂ ಉದ್ಯಮಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಿ.ಎಸ್.ಆರ್ ನಿಧಿಯನ್ನು ಶಾಲಾ ಕಟ್ಟಡ ಸ್ಮಾರ್ಟ ತರಗತಿಗಳು, ಕಂಪ್ಯೂಟರ್ ಪ್ರಯೋಗಾಲಯ, ಡಿಜಿಟಲ್ ಗ್ರಂಥಾಲಯ, ಹೈಟೆಕ್ ಶೌಚಾಲಯ, ಸಾರಿಗೆ ವ್ಯವಸ್ಥೆ, ಅತಿಥಿ ಶಿಕ್ಷಕರ ವೇತನ ಸೇರಿ ಶಾಲೆಯ ಸಮಗ್ರ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಸುಧಾರಣೆ ಹಾಗೂ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರು ನಿರ್ದೇಶನ ನೀಡಿದ್ದಾರೆ

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ