ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ
🎓 ಶಿಕ್ಷಣ
Dr. K N Doddmani · · 228 ವೀಕ್ಷಣೆಗಳು

ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ

ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಆಸಕ್ತ ಉದ್ಯಮ ಸಂಸ್ಥೆಯವರು ನಮ್ಮ ಶಾಲೆ-ನನ್ನ ಕೊಡುಗೆ ಪೋರ್ಟಲ್ ನಲ್ಲಿ (http://nsnk.karnataka.gov.in) ನೋಂದಣಿ ಮಾಡಿಕೊಳ್ಳುವ ಮೂಲಕ ಶಾಲೆಗಳನ್ನು ದತ್ತು ಪಡೆದುಕೊಳ್ಳಬಹುದಾಗಿದೆ.

ಅಸ್ಮಿತೆ ವರದಿ, ಜುಲೈ, ೨೩: ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಅಭಿವೃದ್ಧಿ ಪಡಿಸಲು ಉದ್ದೇಶಸಲಾಗಿದ್ದು ಶೈಕ್ಷಣಿಕ ಕಾಳಜಿಯ ಆಸಕ್ತ ಉದ್ಯಮ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೆ ಕೈಜೋಡಿಸಬಹುದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಇಂದು  ಜರುಗಿದ ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿ.ಸಿ.ಎಸ್.ಆರ್) ಅನುಷ್ಠಾನ ಜಿಲ್ಲಾ ಕೋಶದ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಆಸಕ್ತ ಉದ್ಯಮ ಸಂಸ್ಥೆಯವರು ನಮ್ಮ ಶಾಲೆ-ನನ್ನ ಕೊಡುಗೆ ಪೋರ್ಟಲ್ ನಲ್ಲಿ (http://nsnk.karnataka.gov.in) ನೋಂದಣಿ ಮಾಡಿಕೊಳ್ಳುವ ಮೂಲಕ ಶಾಲೆಗಳನ್ನು ದತ್ತು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಿ.ಎಸ್.ಆರ್ ಕೋಶವನ್ನು ಅಥವಾ ಸಂಬಂಧಪಟ್ಟ ವಿಭಾಗಗಳ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿ ಪಡೆಸಲು ನಿರ್ಧರಿಸಲಾಗಿದೆ. ಕಳೆದ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಎರಡು ವಿಭಾಗದಲ್ಲಿ ಉತ್ತಮ ಫಲಿತಾಂಶ ಮೂಡಿ ಬಂದಿದೆ. ಸಿ.ಎಸ್.ಆರ್ ನಿಧಿಯ ಮೂಲಕ ಶಾಲೆ ಹಾಗೂ ಮಕ್ಕಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವುದರಿಂದ ಮತ್ತಷ್ಟು ಶೈಕ್ಷಣಿಕ ಪ್ರಗತಿ ಸಾಧ್ಯವಾಗುತ್ತದೆ ಎಂದು  ಹೇಳಿದರು.

ಸಭೆಯಲ್ಲಿ ಶಾಲಾಶಿಕ್ಷಣಕ ಮತ್ತು ಸಾಕ್ಷರತಾ ಇಲಾಖೆ ಬೆಳಗಾವಿ ವಿಭಾಗದ ಉಪನಿರ್ದೇಶಕಿ ಲೀಲಾವತಿ ಹಿರೇಮಠ, ಚಿಕ್ಕೋಡಿ ವಿಭಾಗದ ಉಪನಿರ್ದೇಶಕ ಆರ್.ಎಸ್.ಸೀತಾರಾಮು, ಲೀಡ್ ಬ್ಯಾಂಕ ವ್ಯವಸ್ಥಾಪಕ ಪ್ರಶಾಂತ ಘೋಡಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಉದ್ಯಮಿಗಳು ಹಾಗೂ ವಿವಿಧ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ