ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಹೊಸ ಕ್ಯಾಂಪಸ್ ಗೆ ಆಗಸ್ಟ್ ದಿಂದ ಆರ್ ಸಿಯು     ಶಿಪ್ಟಿಂಗ್; ಅಕ್ಟೋಬರ್ ದಲ್ಲಿ ಪೂರ್ಣ - ಕುಲಪತಿ
🎓 ಶಿಕ್ಷಣ
Dr. K N Doddmani · · 109 ವೀಕ್ಷಣೆಗಳು

ಹೊಸ ಕ್ಯಾಂಪಸ್ ಗೆ ಆಗಸ್ಟ್ ದಿಂದ ಆರ್ ಸಿಯು ಶಿಪ್ಟಿಂಗ್; ಅಕ್ಟೋಬರ್ ದಲ್ಲಿ ಪೂರ್ಣ - ಕುಲಪತಿ

ಅಕ್ಟೋಬರ್ ವೇಳೆಗೆ ಪ್ರಮುಖ ಚಟುವಟಿಕೆಗಳು ನೂತನ ಕ್ಯಾಂಪಸ್‌ನಿಂದ ನಡೆಯುವಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೊಸ ಕ್ಯಾಂಪಸ್‌ನಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯಗಳು, ಡಿಜಿಟಲ್ ಕಲಿಕೆ ಮತ್ತು ಕೌಶಲ ತರಬೇತಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಧುನಿಕ ಶೈಕ್ಷಣಿಕ ವಾತಾವರಣ ಒದಗಿಸುವುದು ಇದರ ಉದ್ದೇಶವಾಗಿದೆ ...

ಅಸ್ಮಿತೆ ವರದಿ, ಅ.17 : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳು ಬರುವ ಅಕ್ಟೋಬರ್ ತಿಂಗಳಲ್ಲಿ  ಹಿರೇಬಾಗೇವಾಡಿ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕ್ಯಾಂಪಸ್‌ಗೆ ಸ್ಥಳಾಂತರಗೊಳ್ಳಲಿದ್ದು, ಮೊದಲ ಹಂತವಾಗಿ ಆಗಸ್ಟ್ 20ರಿಂದ ಹತ್ತು ವಿಭಾಗಗಳ ಸ್ಥಳಾಂತರ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತ್ಯಾಗರಾಜ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಭಾನುವಾರ ಕರ್ನಾಟಕ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತರನ್ನು ಸನ್ಮಾನಿಸಿ ಮಾತನಾಡಿದ ಅವರು, ನೂತನ ಕ್ಯಾಂಪಸ್ ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಸಂಶೋಧನೆ ಮತ್ತು ಕೌಶಲಾಭಿವೃದ್ಧಿಗೆ ಹೊಸ ಅವಕಾಶಗಳನ್ನು ಒದಗಿಸುವ ಪ್ರಮುಖ ಶೈಕ್ಷಣಿಕ ಕೇಂದ್ರವಾಗಲಿದೆ ಎಂದರು.

ಮೊದಲ ಹಂತದಲ್ಲಿ ಆಗಸ್ಟ್ 20ರಿಂದ ಹತ್ತು ವಿಭಾಗಗಳ ಸ್ಥಳಾಂತರ ಆರಂಭವಾಗಲಿದೆ. ನಂತರ ಹಂತ ಹಂತವಾಗಿ ಉಳಿದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಹೊಸ ಕ್ಯಾಂಪಸ್‌ಗೆ ಸ್ಥಳಾಂತರಿಸಿ, ಅಕ್ಟೋಬರ್ ವೇಳೆಗೆ ಪ್ರಮುಖ ಚಟುವಟಿಕೆಗಳು ನೂತನ ಕ್ಯಾಂಪಸ್‌ನಿಂದ ನಡೆಯುವಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೊಸ ಕ್ಯಾಂಪಸ್‌ನಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯಗಳು, ಡಿಜಿಟಲ್ ಕಲಿಕೆ ಮತ್ತು ಕೌಶಲ ತರಬೇತಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಧುನಿಕ ಶೈಕ್ಷಣಿಕ ವಾತಾವರಣ ಒದಗಿಸುವುದು ಇದರ ಉದ್ದೇಶವಾಗಿದೆ ಎಂದು ಕುಲಪತಿ ತಿಳಿಸಿದರು.

 ‘ಇ–ಸ್ಪರ್ಧಾ’ ವೇದಿಕೆ:

ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಸುಮಾರು 1.40 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಲ್ಲಿ ಸುಮಾರು ಶೇ.80ರಷ್ಟು ವಿದ್ಯಾರ್ಥಿಗಳು ಹಿಂದುಳಿದ, ದಲಿತ ಹಾಗೂ ಸಾಮಾನ್ಯ ಕುಟುಂಬಗಳಿಂದ ಬಂದವರಾಗಿದ್ದಾರೆ.ಇಂತಹ ವಿದ್ಯಾರ್ಥಿಗಳಿಗೆ ಶಿಕ್ಷಣವೇ ದೊಡ್ಡ ಶಕ್ತಿ. ಹೀಗಾಗಿ ತಂತ್ರಜ್ಞಾನವನ್ನು ಬಳಸಿಕೊಂಡು ಶಿಕ್ಷಣವನ್ನು ಇನ್ನಷ್ಟು ಸುಲಭವಾಗಿ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರ ಭಾಗವಾಗಿ ‘ಇ–ವಿದ್ಯಾ’ ವೇದಿಕೆಯಲ್ಲಿ ಸುಮಾರು 8 ಸಾವಿರ ಪಾಠಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಈ ಪಾಠಗಳನ್ನು ಆಲಿಸಲು ಮತ್ತು ಕಲಿಯಲು ಸಾಧ್ಯವಾಗಲಿದೆ. ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಶೈಕ್ಷಣಿಕ ಸಂಪನ್ಮೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಡಿಜಿಟಲ್ ವೇದಿಕೆ ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರೊ. ತ್ಯಾಗರಾಜ್ ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ:  ಇ ವೇದಿಕೆಯ ಮೂಲಕ ವಿದ್ಯಾರ್ಥಿಗಳು ಮೊಬೈಲ್‌ನಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ದೂರದ ಪ್ರದೇಶಗಳ ವಿದ್ಯಾರ್ಥಿಗಳಿಗೂ ಉತ್ತಮ ತರಬೇತಿ ಸಂಪನ್ಮೂಲಗಳನ್ನು ತಲುಪಿಸುವ ಉದ್ದೇಶ ಹೊಂದಲಾಗಿದೆ. ಇದರ ಜೊತೆಗೆ ವಿಶ್ವವಿದ್ಯಾಲಯದ ವ್ಯಾಪ್ತಿಯ 40 ಕಾಲೇಜುಗಳ ಸುಮಾರು 10 ಸಾವಿರ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ನೀಡುವ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದರು.

ಬಸವಣ್ಣ ಸೇರಿ 5 ಅಧ್ಯಯನ ಪೀಠಗಳು: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಈ ವರ್ಷ ಬಸವಣ್ಣ ಅಧ್ಯಯನ ಪೀಠ ಆರಂಭಿಸಲಾಗಿದ್ದು, ಇದರೊಂದಿಗೆ ವಿಶ್ವವಿದ್ಯಾಲಯದಲ್ಲಿ ಒಟ್ಟು ಐದು ಪ್ರಮುಖ ಅಧ್ಯಯನ ಪೀಠಗಳು ಕಾರ್ಯನಿರ್ವಹಿಸಲಿವೆ. ಅವುಗಳೆಂದರೆ ಬಸವಣ್ಣ ಅಧ್ಯಯನ ಪೀಠ, ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಪೀಠ, ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ, ಕಿತ್ತೂರು ರಾಣಿ ಚನ್ನಮ್ಮ ಅಧ್ಯಯನ ಪೀಠ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಧ್ಯಯನ ಪೀಠ. ಈ ಅಧ್ಯಯನ ಪೀಠಗಳು ಕೇವಲ ಹೆಸರಿಗಷ್ಟೇ ಸೀಮಿತವಾಗದೆ ಸಮಾಜಮುಖಿ, ಜ್ಞಾನಮುಖಿ ಹಾಗೂ ಸೇವಾಮುಖಿ ಚಟುವಟಿಕೆಗಳನ್ನು ನಡೆಸಬೇಕು ಎಂದು ಕುಲಪತಿ ಹೇಳಿದರು.

ಪತ್ರಕರ್ತರ ದಿನಾಚರಣೆ ಕಾರ್ಯಕ್ರಮ: ಕರ್ನಾಟಕ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು. ನಾಗನೂರು ರುದ್ರಾಕ್ಷಿಮಠದ  ಡಾ. ಅಲ್ಲಮಪ್ರಭು ಸ್ವಾಮಿಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಸಂಘದ ಅಧ್ಯಕ್ಷ ಮುರುಗೇಶ ಶಿವಪೂಜಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಕಾರ್ತಿಕ ಎಂ., ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್, ವಿಟಿಯು ಕುಲಸಚಿವ ಪ್ರಸಾದ ರಾಂಪುರೆ, ಆರ್‌ಸಿಯು ಕುಲಪತಿ ಪ್ರೊ. ತ್ಯಾಗರಾಜ್, ಡಿಸಿಪಿ ನಾರಾಯಣ ಬರಮನಿ, ಬಸವರಾಜ ರೊಟ್ಟಿ, ಬ್ರಹ್ಮಾನಂದ ಹಡಗಲಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ