ಬ್ರೇಕಿಂಗ್
70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ - ಸ್ವಪ್ನಿಲ್ ಶಾ ನೂತನ ಅಧ್ಯಕ್ಷ ಸಾಂಸ್ಕೃತಿಕ ಮೆರುಗು ತಂದ ಯುವ ಸೌರಭ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ 70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಾಂಪ್ರದಾಯಿಕ ಆಯುಷ್ ಔಷಧಿ ಗುಣಮಟ್ಟದ ಸುಧಾರಣೆಗಾಗಿ ICMR ದಲ್ಲಿ ‌ತಜ್ಞರ ಕಾರ್ಯಾಗಾರ ಚಂಪಾ, ಕಣವಿ, ಚಿದಾನಂದಮೂರ್ತಿ ಸಮಗ್ರ ಸಾಹಿತ್ಯ ಸಂಪುಟ ಲಭ್ಯ ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ - ಸ್ವಪ್ನಿಲ್ ಶಾ ನೂತನ ಅಧ್ಯಕ್ಷ ಸಾಂಸ್ಕೃತಿಕ ಮೆರುಗು ತಂದ ಯುವ ಸೌರಭ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ
01 ಆಗಸ್ಟ್ 2026
70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ
💼 ಉದ್ಯೋಗ
Dr. K N Doddmani · · 137 ವೀಕ್ಷಣೆಗಳು

70 ಸಾವಿರ ಹುದ್ದೆಗಳು, 35 ಲಕ್ಷ ಅರ್ಜಿ ನಿರೀಕ್ಷೆ: ಇಡೀ ದೇಶಕ್ಕೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕ ನೇಮಕಾತಿ : ಸಿಎಮ್ ನಿರ್ಧಾರ

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದರಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಪೂರ್ಣ ಪಾರದರ್ಶಕ ಹಾಗೂ ಮೆರಿಟ್ ಆಧಾರಿತ ನೇಮಕಾತಿ ನಡೆಸಲು ನಮ್ಮ ಸರ್ಕಾರ ಬದ್ಧವಾಗಿದೆ.

ಅಸ್ಮಿತೆ ವರದಿ, ಜು.31: ಕರ್ನಾಟಕದಾದ್ಯಂತ 70,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಸಿದ್ಧತೆ ನಡೆದಿದ್ದು, ಮುಂಬರುವ ಕೆಪಿಎಸ್‌ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ಸುಮಾರು 35 ಲಕ್ಷ ಅಭ್ಯರ್ಥಿಗಳು ಹಾಜರಾಗುವ ನಿರೀಕ್ಷೆಯಿದೆ. ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಬೇಕು ಮತ್ತು ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ತಡೆಯಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದ್ದು, ನೇಮಕಾತಿ ಪ್ರಕ್ರಿಯೆ ಇಡೀ ದೇಶದಲ್ಲಿ ಮಾದರಿಯಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸ್ಪಷ್ಟಪಡಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆ ಪರಿಶೀಲಿಸಲು ಗೃಹ ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ಉನ್ನತ ಮಟ್ಟದ ಸಭೆಯನ್ನು ನಡೆಸಿದ ನಂತರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ‌ಯನ್ನು ಅವರು ಹಂಚಿಕೊಂಡಿದ್ದಾರೆ.

ಪರೀಕ್ಷೆಯ ಪ್ರತಿಯೊಂದು ಹಂತವನ್ನೂ ವಿಡಿಯೋ ರೆಕಾರ್ಡ್ ಮಾಡಲಾಗುತ್ತದೆ. ಖಾಸಗಿ ಕೋಚಿಂಗ್ ಸೆಂಟರ್‌ಗಳ ಮೇಲೆ ತೀವ್ರ ನಿಗಾ ಇಡಲು ಪೊಲೀಸರಿಗೆ ಸೂಚಿಸಲಾಗಿದ್ದು, ಪರೀಕ್ಷಾ ಕರ್ತವ್ಯನಿರತ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದರಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಪೂರ್ಣ ಪಾರದರ್ಶಕ ಹಾಗೂ ಮೆರಿಟ್ ಆಧಾರಿತ ನೇಮಕಾತಿ ನಡೆಸಲು ನಮ್ಮ ಸರ್ಕಾರ ಬದ್ಧವಾಗಿದೆ.

ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಮಗ್ರ ಸುಧಾರಣೆಗಳನ್ನು ತರಲು ಎಸ್. ವಿ. ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುತ್ತಿದೆ. ಟಿ. ಎಂ. ವಿಜಯಭಾಸ್ಕರ್, ವಂದಿತಾ ಶರ್ಮಾ ಹಾಗೂ ಎಲ್. ಕೆ. ಅತೀಕ್ ಅವರು ಈ ಸಮಿತಿಯ ಸದಸ್ಯರಾಗಿರಲಿದ್ದಾರೆ.

ಪಾರದರ್ಶಕ ಹಾಗೂ ನಂಬಿಕಾರ್ಹ ನೇಮಕಾತಿ ಪ್ರಕ್ರಿಯೆಯಲ್ಲಿ ಕರ್ನಾಟಕವು ಇಡೀ ದೇಶಕ್ಕೇ ಮಾದರಿಯಾಗಬೇಕು. ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗೂ ನಮ್ಮ ವ್ಯವಸ್ಥೆಯ ಮೇಲೆ ಸಂಪೂರ್ಣ ಭರವಸೆ ಇರಬೇಕು; ಆ ನಂಬಿಕೆಯನ್ನು ಉಳಿಸಿಕೊಳ್ಳುವುದು ನಮ್ಮ ಆದ್ಯತೆಯಾಗಿರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಉದ್ಯೋಗ

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸಿರುವ ಯುವಕರ ಭವಿಷ್ಯದ ದೃಷ್ಟಿಯಿಂದ, ಅರ್ಹ ಅಭ್ಯರ್ಥಿಗಳು ಅವಕಾಶದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

Admin
💼 ಉದ್ಯೋಗ
ಉದ್ಯೋಗ

ಗ್ರಾಮೀಣ ಅಭ್ಯರ್ಥಿಗಳ ಉದ್ಯೋಗಾವಕಾಶಕ್ಕೆ ಮುನವಳ್ಳಿಯಲ್ಲಿ ಉದ್ಯೋಗ ಮೇಳ

ಸವದತ್ತಿ ತಾಲೂಕಿನ ಶಿಂದೋಗಿ ಮುನವಳ್ಳಿಯ ಶ್ರೀ ಕುಮಾರೇಶ್ವರ ವಿದ್ಯಾಮಂದಿರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಗ್ರಾಮೀಣ ಪ್ರದೇಶದ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ

Admin