ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ
💼 ಉದ್ಯೋಗ
Dr. K N Doddmani · · 192 ವೀಕ್ಷಣೆಗಳು

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸಿರುವ ಯುವಕರ ಭವಿಷ್ಯದ ದೃಷ್ಟಿಯಿಂದ, ಅರ್ಹ ಅಭ್ಯರ್ಥಿಗಳು ಅವಕಾಶದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅಸ್ಮಿತೆ ಸುದ್ದಿ : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿನ ವಿವರಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ.

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪ್ರಸ್ತುತ ಚಾಲ್ತಿಯಲ್ಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-07-2026 ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 04-07-2026 ಎಂದು ನಿಗದಿ ಪಡಿಸಲಾಗಿತ್ತು.

ತಾಂತ್ರಿಕ ಸಮಸ್ಯೆಗಳು, ಪ್ರಮಾಣ ಪತ್ರಗಳನ್ನು ಪಡೆಯಲು ವಿಳಂಬ ಹಾಗೂ ಇತರೆ ಅನೇಕ ಕಾರಣಗಳಿಂದ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಹಾಗೂ ಈಗಾಗಲೇ ಸಲ್ಲಿಸಿದ ಅರ್ಜಿಗಳಲ್ಲಿ ತಪ್ಪಾದ ಮಾಹಿತಿಗಳನ್ನು ನಮೂದಿಸಿದ ಹಿನ್ನಲೆಯಲ್ಲಿ, ಅರ್ಜಿಗಳಲ್ಲಿನ ವಿವರಗಳನ್ನು ತಿದ್ದುಪಡಿ ಮಾಡಲು ಅವಕಾಶ ನೀಡಬೇಕು ಎಂದು ಕೆಲವು ಅಭ್ಯರ್ಥಿಗಳು ಮನವಿ ಮಾಡಿದ್ದರು. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸಿರುವ ಯುವಕರ ಭವಿಷ್ಯದ ದೃಷ್ಟಿಯಿಂದ, ಅರ್ಹ ಅಭ್ಯರ್ಥಿಗಳು ಅವಕಾಶದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ಸಾಮಾಜಿಕ‌‌ ಜಾಲತಾಣದಲ್ಲಿ ಮಾಹಿತಿ ನೀಡಿರುವ ಅವರು,ಅಭ್ಯರ್ಥಿಗಳ ಅನುಕೂಲತೆಗಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಇರುವ ಕೊನೆಯ ದಿನಾಂಕವನ್ನು 08 ಜುಲೈ, 2026ರ ಸಂಜೆ 4.00 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ತಿದ್ದುಪಡಿ ಮಾಡಲು 09 ಜುಲೈ, 2026 ರಿಂದ 12 ಜುಲೈ, 2026 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 3,395 ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ 596 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಯೋಗದಲ್ಲಿ ನೇಮಕಾತಿ ನಡೆಸಲಾಗುತ್ತಿದೆ. ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಈಗಾಗಲೇ 2,80,216 ಅರ್ಜಿಗಳು ಮತ್ತು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ 59,309 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದು ರಾಜ್ಯದ ಯುವಜನರಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಉತ್ಸಾಹ ಹೆಚ್ಚಿರುವುದನ್ನು ಹಾಗೂ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಮೇಲೆ ಜನರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ